ADVERTISEMENT

ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅಪಘಾತ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 16:40 IST
Last Updated 16 ಜನವರಿ 2022, 16:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸೋಲಾಪುರ: ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ತೇರಾ ಮೈಲ್ ಹತ್ತಿರ ಸ್ಕಾರ್ಪಿಯೋ (ಎಂ.ಎಚ್‌ 13 ಝಡ್‌ 9909) ಕಾರು ಭಾನುವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇದ್ದ ಗಿಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸೋಲಾಪುರ ನಗರದ ಕಿಶೋರ್ ಭೋಸ್ಲೆ(45), ನಿತಿನ್ ಭಾಂಗೆ(32), ವೆಂಕಟೇಶ್ ಮೇತ್ರೆ (45)  ಸಾವಿಗಿಡಾಗಿದ್ದಾರೆ ಎಂದು ಗುರುತಿಸಲಾಗಿದೆ. ರಾಕೇಶ್ ಹುಚ್ಚೆ ಗಂಭೀರ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔರಾದ್‌ನಿಂದ ಸೋಲಾಪುರಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸಾರಾಂಶ

ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ತೇರಾ ಮೈಲ್ ಹತ್ತಿರ ಸ್ಕಾರ್ಪಿಯೋ (ಎಂ.ಎಚ್‌ 13 ಝಡ್‌ 9909) ಕಾರು ಭಾನುವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇದ್ದ ಗಿಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.