ADVERTISEMENT

ಅಪಘಾತ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 5:54 IST
Last Updated 21 ಜನವರಿ 2022, 5:54 IST

ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದ ಬಳಿ ಗುರುವಾರ ಬುಲೆರೊ ಜೀಪು ಹಾಗೂ ದ್ವಿಚಕ್ರವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಬಿರನೂರ ಗ್ರಾಮದ ಮಲ್ಲಿಕಾರ್ಜುನ ಮಹಾದೇವಪ್ಪ(45) ಮೃತರು.

ಗಾಯಗೊಂಡಿರುವ ವ್ಯಕ್ತಿ ಸುಭಾಸ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಬುಲೆರೊ ಜೀಪಿನ ಮುಂದಿನ ಗಾಲಿಯ ಟೈರ್ ಸಿಡಿದ ಪರಿಣಾಮ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾರಾಂಶ

ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದ ಬಳಿ ಗುರುವಾರ ಬುಲೆರೊ ಜೀಪು ಹಾಗೂ ದ್ವಿಚಕ್ರವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.