ಬೀದರ್: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವಿದ್ಯಾರ್ಥಿ ವೇತನ ಯೋಜನೆಯಡಿ ಶಿಷ್ಯವೇತನ ಕೊಡಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಒಂದನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಆರ್ಥಿಕ ಸಹಾಯ ಪಡೆಯಲು ಅರ್ಹರಿರುತ್ತಾರೆ. ಈ ಯೋಜನೆಯಡಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ₹ 30 ಸಾವಿರ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ₹ 60 ಸಾವಿರ ದೊರೆಯಲಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿಗಳಿಗಾಗಿ www.b4s.in/a/ABCC1 ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ: adityabirlacapital@buddy4study.com ಅಥವಾ ದೂ.ನಂ.011-43092240(268) ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೀದರ್: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವಿದ್ಯಾರ್ಥಿ ವೇತನ ಯೋಜನೆಯಡಿ ಶಿಷ್ಯವೇತನ ಕೊಡಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.