ಕೊಚ್ಚಿ: ಮಲಯಾಳಂ ಜನಪ್ರಿಯ ನಟಿಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್ ಶನಿವಾರಕ್ಕೆ (ಅ.22) ಮುಂದೂಡಿದೆ.
ಈ ಮೂಲಕ ಪ್ರಕರಣದ ವಿಚಾರಣೆಯನ್ನು ಸತತ ನಾಲ್ಕನೇ ಬಾರಿಗೆ ಮುಂದೂಡಿದಂತಾಗಿದೆ.
ಪ್ರಕರಣ ಸಂಬಂಧ ಇಂದು (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾಯಪೀಠ, ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಶನಿವಾರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಆದೇಶಿಸಿದೆ.
ನಿರ್ದೇಶಕ ಬಾಲಚಂದ್ರ ಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಚಾರಗಳನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಹಲ್ಲೆ ಪ್ರಕರಣದ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ನಟ ದಿಲೀಪ್ ವಿರುದ್ಧ ಮತ್ತೊಂದು ಹೊಸ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರು ಜ.10ರಂದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣಾಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೇರಳ ಪೊಲೀಸ್ ಅಪರಾಧ ವಿಭಾಗವು ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಿತ್ತು.
ಇದೇ ಪ್ರಕರಣ ಸಂಬಂಧ 2017ರಲ್ಲಿ ದಿಲೀಪ್ ಅವರನ್ನು ಬಂಧಿಸಲಾಗಿತ್ತು. ಎರಡು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಮಲಯಾಳಂ ಜನಪ್ರಿಯ ನಟಿಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್ ಶನಿವಾರಕ್ಕೆ (ಅ.22) ಮುಂದೂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.