ADVERTISEMENT

ಅಕ್ರಮ ಹಣ ವರ್ಗಾವಣೆ: ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಗೆ ಇ.ಡಿ ಸಮನ್ಸ್‌

ಪ್ರಜಾವಾ‌ಣಿ ವೆಬ್ ಡೆಸ್ಕ್‌
Published 14 ಅಕ್ಟೋಬರ್ 2021, 10:41 IST
Last Updated 14 ಅಕ್ಟೋಬರ್ 2021, 10:41 IST
ನೋರಾ ಫತೇಹಿ, ಜಾಕ್ವೆಲಿನ್ ಫರ್ನಾಂಡಿಸ್
ನೋರಾ ಫತೇಹಿ, ಜಾಕ್ವೆಲಿನ್ ಫರ್ನಾಂಡಿಸ್   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಸಮನ್ಸ್‌ ನೀಡಿದೆ.

₹ 200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಮೂಲದ ಜಾಕ್ವೆಲಿನ್‌ ಮತ್ತು ಕೆನಡಾ ಮೂಲದ ನೂರಾ ಫತೇಹಿ ಅವರ ಹೆಸರು ಕೇಳಿಬಂದಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ಇ.ಡಿ ನಡೆಸಿತ್ತು. 29 ವರ್ಷದ ನಟಿ ಹಾಗೂ ನೃತ್ಯಗಾರ್ತಿ ನೂರಾ ಫತೇಹಿ ಅವರು ಸಹ ಇ.ಡಿ ವಿಚಾರಣೆಗೆ ಒಳಪಟ್ಟಿದ್ದಾರೆ. 

ADVERTISEMENT

ಹಣ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಾರಾಂಶ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಸಮನ್ಸ್‌ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.