ADVERTISEMENT

Test 3 24 Feb 2023-ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಗಣನೆ: ಪ್ರಧಾನಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಬಿಜೆಪಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೊಸದಾಗಿ ನಿರ್ಮಾಣಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ಚುನಾವಣೆ ಸಹ ಸನಿಹವಾಗುತ್ತಿರುವುದರಿಂದ ಮೋದಿ ಹೆಸರಲ್ಲಿ ಪ್ರಚಾರ ಮಾಡುವುದಕ್ಕೂ ಬಿಜೆಪಿ ನಾಯಕರು ಪ್ಲಾನ್​ ಮಾಡಿದ್ದಾರೆ. ಹೀಗಾಗಿಯೇ ಮೋದಿ ಆಗಮನದ ವೇಳೆ ಭಾರೀ ಪ್ರಮಾಣದಲ್ಲಿ ಕಾರ್ಯಕರ್ತರನ್ನ ಸೇರುವ ನಿರೀಕ್ಷೆಯಿದ್ದು, ವಿಮಾನ ನಿಲ್ದಾಣ ರಸ್ತೆ ಸ್ವಚ್ಛತೆ, ದುರಸ್ತಿ ಕಾರ್ಯ ಹಾಗೂ ಬೃಹತ್‌ ಸಂಖ್ಯೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

Raja K
Published 24 ಫೆಬ್ರುವರಿ 2023, 5:45 IST
Last Updated 24 ಫೆಬ್ರುವರಿ 2023, 5:45 IST
Test caption:ಸಿದ್ಧತೆ
Test caption:ಸಿದ್ಧತೆ   ಭರ್ಜರಿ

ಶಿವಮೊಗ್ಗ: ವಿಮಾನ ನಿಲ್ದಾಣ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ, ವಿಮಾನ ನಿಲ್ದಾಣ ಮತ್ತು ಅದನ್ನು ಸಂಪರ್ಕಿಸುವ ನರಸಿಂಹರಾಜಪುರ ರಸ್ತೆಯನ್ನು ದುರಸ್ತಿ ಮತ್ತು ಸ್ವಚ್ಛ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ.

ಚುನಾವಣೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಇದು ಸರಕಾರಿ ಕಾರ್ಯಕ್ರಮವಾದ್ದರಿಂದ ಅದ್ದೂರಿಯಾಗಿ ಮತ್ತು ಭಾರಿ ಜನಸಾಗರದೊಂದಿಗೆ ಪ್ರಧಾನಿಯನ್ನು ಸ್ವಾಗತಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸಿದ್ಧತೆ ನಡೆಸಿವೆ. ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಮಾತ್ರ ಉಳಿದಿರುವುದರಿಂದ ಆಡಳಿತ ಪಕ್ಷವಾದ ಬಿಜೆಪಿಯು ಭಾರಿ ಜನಸ್ತೋಮವನ್ನು ಸೇರಿಸಿ ಜನಮನ ಸೆಳೆಯುವ ಪ್ರಯತ್ನ ಕೂಡ ನಡೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.