ಚೆನ್ನೈ: ಮಾಜಿ ಮುಖ್ಯಮಂತ್ರಿ ಪಳನಿಸ್ವಾಮಿ ಅವರನ್ನು ಪಕ್ಷದ ಹಂಗಾಮಿ ಕಾರ್ಯದರ್ಶಿಯಾಗಿ ಮುಂದುವರಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಸುಮಾರು ಒಂದು ತಿಂಗಳ ನಂತರ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷವು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರೊಂದಿಗೆ ನಾಯಕತ್ವದ ಸಂಘರ್ಷದಲ್ಲಿ ತೊಡಗಿದ್ದ ಪಳನಿಸ್ವಾಮಿ ಅವರನ್ನು ಪಕ್ಷದ ಉನ್ನತ ಹುದ್ದೆಗೆ ಏರಿಸುವ ಹಾದಿಯನ್ನು ಸುಪ್ರೀಂ ಕೋರ್ಟ್ ತೀರ್ಪು ಸುಗಮಗೊಳಿಸಿತ್ತು.
ಮಾರ್ಚ್ 23 ರಂದು ಚುನಾವಣೆ ನಡೆಯಲಿದ್ದು, ಇಂದು ಮತ್ತು ನಾಳೆ ನಾಮಪತ್ರ ಸಲ್ಲಿಸಬಹುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಸೇಲಂನ ಪ್ರಬಲ ನಾಯಕ ಪಳನಿಸ್ವಾಮಿ ಬೆನ್ನಿಗೆ ಇಡೀ ಪಕ್ಷವೇ ನಿಂತಿರುವುದರಿಂದ ಯಾವುದೇ ಪೈಪೋಟಿ ಇರುವುದಿಲ್ಲ.
ಮಾರ್ಚ್ 27 ರಂದು ಮತ ಎಣಿಕೆ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.