ನವದೆಹಲಿ (ರಾಯಿಟರ್ಸ್): ಉಪ್ಪಿನಿಂದ ಉಕ್ಕಿನವರೆಗೆ, ಏರ್‌ಪಿನ್‌ನಿಂದ ಏರೋಪ್ಲೇನ್‌ವರೆಗೆ ಟಾಟಾ ಮುಟ್ಟದೇ ಇರುವ ಕ್ಷೇತ್ರವಿಲ್ಲ. ಹಾಗೆಯೇ ತಾವು ಕೈಇಟ್ಟ ಕ್ಷೇತ್ರದಲ್ಲಿ ಕಾಪಾಡಿಕೊಂಡ ನೈತಿಕತೆ, ವಿಶ್ವಾಸಾರ್ಹತೆಯಿಂದಲೇ ‘ಟಾಟಾ’ ಬ್ರಾಂಡ್ ಆಗಿ ಟಾಟಾ ಸಮೂಹ ತನ್ನ ಛಾಪು ಮೂಡಿಸಿದೆ.
ರತನ್ ಟಾಟಾ ಅವರ ದೂರದೃಷ್ಟಿ ಮತ್ತು ಕನಸುಗಳಿಂದ ಟಾಟಾ ಸಮೂಹ ಬಹುರಾಷ್ಟ್ರೀಯ ಕಂಪನಿಯಾಗಿ ಜಾಗತಿಕ ಮಟ್ಟದಲ್ಲೂ ಸಾಮ್ರಾಜ್ಯ ವಿಸ್ತರಿಸಿದೆ.
1868 ಭಾರತವು ತನ್ನ ಆರ್ಥಿಕತೆಯನ್ನು ತೆರೆದ ವರ್ಷ. ಸಣ್ಣ ಜವಳಿ ಮತ್ತು ವ್ಯಾಪಾರ ಸಂಸ್ಥೆಯಾಗಿ ಪ್ರಾರಂಭವಾದ ಟಾಟಾ ಸಂಸ್ಥೆಯನ್ನು ಉಪ್ಪಿನಿಂದ ಉಕ್ಕಿನವರೆಗೆ, ಕಾರುಗಳಿಂದ ಸಾಫ್ಟ್‌ವೇರ್, ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆ, ವಿಮಾನಯಾನ ಸೇವೆಯೊಂದಿಗೆ ಜಾಗತಿಕ ಶಕ್ತಿ ಕೇಂದ್ರವಾಗಿ ಪರಿವರ್ತಿಸಿತು.
summary- ಟಾಟಾ ಸಂಸ್ಥೆಯನ್ನು ಉಪ್ಪಿನಿಂದ ಉಕ್ಕಿನವರೆಗೆ, ಕಾರುಗಳಿಂದ ಸಾಫ್ಟ್‌ವೇರ್, ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆ, ವಿಮಾನಯಾನ ಸೇವೆಯೊಂದಿಗೆ ಜಾಗತಿಕ ಶಕ್ತಿ ಕೇಂದ್ರವಾಗಿ ಪರಿವರ್ತಿಸಿತು.
ಇಂದು ಜಗತ್ತಿನ ದೊಡ್ಡ ಉದ್ಯಮ ಸಂಸ್ಥೆಗಳಲ್ಲಿ ಒಂದಾಗಿರುವ ಟಾಟಾ ಸನ್ಸ್‌ನ ಗೌರವಾನ್ವಿತ ಅಧ್ಯಕ್ಷರಾಗಿ ರತನ್ ಟಾಟಾ ಅವರು ಎರಡು ದಶಕ ಉದ್ಯಮ ಸಾಮ್ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ರತನ್ ಟಾಟಾ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ರತನ್ ಟಾಟಾ ಅವರು ತಮ್ಮ ಕುಟುಂಬ ಉದ್ಯಮ ಸಾರಥ್ಯವನ್ನು ವಹಿಸಿಕೊಳ್ಳುವುದಕ್ಕೂ ಮೊದಲು ನ್ಯೂಯಾರ್ಕ್‌ನ ಇಥಾಕಾದ ಕಾರ್ನೆಲ್ ವಿಶ್ವವಿದ್ಯಾನಿಲಯದಲ್ಲಿ 1962ರಲ್ಲಿ ವಾಸ್ತುಶಿಲ್ಪ ವಿಷಯದಲ್ಲಿ ಬಿ.ಎಸ್ ಪದವಿ ಪಡೆದರು. ಆರಂಭದ ದಿನಗಳಲ್ಲಿ ಅಂಗಡಿಯೊಂದರಲ್ಲಿ ಕೆಲಸ ಮಾಡಿದ್ದರು. 1971ರಲ್ಲಿ ನ್ಯಾಷನಲ್ ರೇಡಿಯೊ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯ ನಿರ್ದೇಶಕರಾಗಿ ನೇಮಕಗೊಳ್ಳುವ ಮೊದಲು ಟಾಟಾ ಸಮೂಹದ ಹಲವಾರು ವ್ಯವಹಾರಗಳಲ್ಲಿ ಅನುಭವವನ್ನು ಪಡೆದುಕೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.