ಮಹಿಳೆಯು ಕಾರು ಓಡಿಸುತ್ತಿದ್ದಳು ಎಂಬ ಕಾರಣಕ್ಕೆ ತಾಲಿಬಾನಿಗಳು ತಾಯಿ ಹಾಗೂ ಮಗುವನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ವಿಡಿಯೊವನ್ನು ಹಂಚಿಕೊಂಡಿರುವ ಕೆಲವರು, ಇದನ್ನು ಭಾರತದ ಮುಸ್ಲಿಮರ ಜೊತೆ ಹೋಲಿಕೆ ಮಾಡುವ ಯತ್ನ ಮಾಡಿದ್ದಾರೆ. ‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತ ಭಾವನೆ ಹೊಂದಿದ್ದಾರೆ. ಈ ಅಮಾಯಕರನ್ನು ಹೊಡೆದುರುಳಿಸಿದವರು ನಿಮ್ಮ ಮುಸ್ಲಿಂ ಸಹೋದರರೇ ಎನ್ನುವುದನ್ನು ತಿಳಿಯಬೇಕು’ ಎಂದು ಯೋಗಿ ಯೋಗೇಶ ಎಂಬುವರು ಟ್ವೀಟ್ ಮಾಡಿದ್ದಾರೆ.
ತಾಲಿಬಾನಿಯರು ಮಹಿಳೆಯರ ಹಕ್ಕುಗಳನ್ನು ಪ್ರಬಲವಾಗಿ ವಿರೋಧಿಸುತ್ತಾರೆ. ಆದರೆ ಈ ವಿಡಿಯೋಗೂ, ಅವರಿಗೂ ಸಂಬಂಧವಿಲ್ಲ ಎಂದು ಇಂಡಿಯಾಟುಡೇ ವರದಿ ಮಾಡಿದೆ. ಈ ಘಟನೆ ಪಾಕಿಸ್ತಾನದಲ್ಲಿ ನವೆಂಬರ್ ತಿಂಗಳಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳೂ ಹತರಾಗಿದ್ದಾರೆ. ಘಟನೆ ನಡೆದಾಗ ಗಂಡ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ಕಾರಿನ ನಂಬರ್ ಪ್ಲೇಟ್ ಗಮನಿಸಿದಾಗ, ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ್ದು ಎಂದು ತಿಳಿದುಬಂದಿದೆ. ಕುಟುಂಬದ ಹಗೆತನದ ಕಾರಣಕ್ಕೆ ಈ ಹತ್ಯೆ ನಡೆದಿದೆ. ಈ ಕುರಿತು ಡಾನ್ ನ್ಯೂಸ್ ಹಾಗೂ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಸುದ್ದಿಸಂಸ್ಥೆಗಳು ವಿವರವಾದ ವರದಿ ಮಾಡಿವೆ.
ಮಹಿಳೆಯು ಕಾರು ಓಡಿಸುತ್ತಿದ್ದಳು ಎಂಬ ಕಾರಣಕ್ಕೆ ತಾಲಿಬಾನಿಗಳು ತಾಯಿ ಹಾಗೂ ಮಗುವನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.