ನವದೆಹಲಿ: ಲಂಡನ್‌ನಲ್ಲಿ ತಾವು ನೀಡಿರುವ ಹೇಳಿಕೆ ವಿವಾದ ಹುಟ್ಟು ಹಾಕಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ವಾಪಾಸ್ ಆದ ಬಳಿಕ ಸಂಸತ್ತಿಗೆ ಆಗಮಿಸಿರುವ ಸಂಸದ ರಾಹುಲ್ ಗಾಂಧಿ, ಅವಕಾಶ ನೀಡಿದರೆ ಮಾತನಾಡುತ್ತೇನೆ ಎಂದು ಗುರುವಾರ ಪ್ರತಿಕ್ರಿಯಿಸಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಕೊಟ್ಟರೆ, ನನ್ನ ಅನಿಸಿಕೆಗಳನ್ನು ಹೇಳಲಿದ್ದೇನೆ ಎಂದು ತಿಳಿಸಿದ್ದಾರೆ.
ಲಂಡನ್‌ನಲ್ಲಿ ತಮ್ಮ ಭಾಷಣದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಅವರು, ದೇಶ ಹಾಗೂ ಸಂಸತ್ತಿನ ವಿರುದ್ಧವಾಗಿ ಏನನ್ನೂ ಮಾತನಾಡಿಲ್ಲ ಎಂದು ತಿಳಿಸಿದರು.
ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಬಿಜೆಪಿ ಇಷ್ಟಪಡುವುದಿಲ್ಲ. ಸಂಸತ್ತಿನಲ್ಲಿ ಅವಕಾಶ ಸಿಗದಿದ್ದರೆ ಸಂಸತ್ ಹೊರಗಡೆ ಮಾತನಾಡುತ್ತೇನೆ ಎಂದು ಹೇಳಿದರು.
ಬ್ರಿಟನ್ ಪ್ರವಾಸದ ವೇಳೆ ರಾಹುಲ್ ದೇಶದ ಪ್ರಜಾಪ್ರಭತ್ವ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಕ್ಷಮೆಯಾಚನೆಗೆ ಬಿಗು ಪಟ್ಟು ಹಿಡಿದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.