ಅಯೋಧ್ಯೆ: ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಗಾಯಾಳುಗಳನ್ನು ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಯೋಧ್ಯೆಯ ಹೊರವಲಯದ ಅಂಬೇಡ್ಕರ್ ನಗರದ ಬಳಿ ತಿರುವಿನಲ್ಲಿ ಖಾಸಗಿ ಬಸ್ ಒಂದು, ವೇಗವಾಗಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.
ಬಸ್ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.