ಪಣಜಿ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಗೋವಾ ಫಾರ್ವರ್ಡ್ ಪಾರ್ಟಿಯು (ಜಿಎಫ್‌ಪಿ) ಇದೇ ದೀಪಾವಳಿ ವೇಳೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಜಿಎಫ್‌ಪಿಯ ಮುಖ್ಯಸ್ಥ ವಿಯಜ್ ಸರ್ದೇಸಾಯಿ ಹೇಳಿದ್ದಾರೆ.
ಭಾನುವಾರ ಸಂಜೆ ದಕ್ಷಿಣ ಗೋವಾ ಜಿಲ್ಲೆಯ ಫರ್ತೋರ್ಡಾದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೋತ್ತರ ಮೈತ್ರಿಗೆ ಜಿಎಫ್‌ಪಿ ಮಾಡಿದ ಮನವಿಯನ್ನು ಗೋವಾದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ತಿರಸ್ಕರಿಸಿ ತನ್ನ ಜವಾಬ್ದಾರಿ ಮತ್ತು ಕರ್ತವ್ಯದಿಂದ ನುಣುಚಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
‘ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜಿಎಫ್‌ಪಿ ಕಳೆದ ಎರಡು ವರ್ಷಗಳಿಂದ ಶ್ರಮಿಸುತ್ತಿದೆ. ನಾವು ಇತರರ ಅನಿಶ್ಚಿತತೆಯ ಧೋರಣೆಯಿಂದ ಸುಮ್ಮನೆ ಕುಳಿತುಕೊಳ್ಳಲು ಮತ್ತು ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಎದುರಿಸಲು ಗೋವಾ ಫಾರ್ವರ್ಡ್ ಪಾರ್ಟಿಯು (ಜಿಎಫ್‌ಪಿ) ಇದೇ ದೀಪಾವಳಿ ವೇಳೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಜಿಎಫ್‌ಪಿಯ ಮುಖ್ಯಸ್ಥ ವಿಯಜ್ ಸರ್ದೇಸಾಯಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.