ADVERTISEMENT

ಅಮಿತ್ ಶಾ ನಿವಾಸದ ಬಳಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ದೌರ್ಜನ್ಯ: ಆರೋಪ

ನವದೆಹಲಿ (ಪಿಟಿಐ):
Published 13 ಅಕ್ಟೋಬರ್ 2021, 6:44 IST
Last Updated 13 ಅಕ್ಟೋಬರ್ 2021, 6:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಬಳಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಡಪಕ್ಷದ ಅಂಗ ಸಂಸ್ಥೆ ಆಲ್‌ ಇಂಡಿಯಾ ಸ್ಟೂಡೆಂಟ್ಸ್‌ ಅಸೋಸಿಯೇಷನ್‌ (ಎಐಎಸ್‌ಎ) ಮಂಗಳವಾರ ಆರೋಪಿಸಿದೆ.

ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಬುಧವಾರ ಇಲ್ಲಿನ ಅಶೋಕ ರಸ್ತೆಯಲ್ಲಿರುವ ದೆಹಲಿ ಪೋಲಿಸ್ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲು ಎಐಎಸ್‌ಎ ಕರೆ ನೀಡಿದೆ.

ಅ.3ರ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಂಬಂಧಿಸಿ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಗೃಹ ಸಚಿವ ಅಮಿತ್ ಶಾ ನಿವಾಸದ ಎಐಎಸ್‌ಎ ಕಾರ್ಯಕರ್ತರು  ಭಾನುವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಲವಂತದಿಂದ ಬಂಧಿಸಿದರು. ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂಘಟನೆ ಆರೋಪಿಸಿದೆ.

ADVERTISEMENT

’ಗೃಹ ಸಚಿವರ ನಿವಾಸದ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಲ್ಲಿ 12 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮಹಿಳಾ ಪ್ರತಿಭಟನಾಕಾರರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಇಲ್ಲಿವರೆಗೂ ಯಾವುದೇ ದೂರುಗಳು ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

’ಪ್ರತಿಭಟನಾ ನಿರತ ಮಹಿಳೆಯರ ಮೇಲೆ ಹಲ್ಲೆ ನಡೆಸುವಂತೆ ಸ್ಥಳದಲ್ಲಿದ್ದ ಸಿಬ್ಬಂದಿಗೆ ಸ್ಪಷ್ಟವಾಗಿ ಸೂಚಿಸಿದ ಎಸಿಪಿ ಚಾಣುಕ್ಯಪುರಿ ಪ್ರಜ್ಞಾ ಆನಂದ್‌ ಅವರನ್ನು ವಜಾಗೊಳಿಸಬೇಕು. ಲೈಂಗಿಕ ದೌರ್ಜನ್ಯ ನಡೆಸಿದ ಅಥವಾ ಅದಕ್ಕೆ ನೆರವಾದ ಎಲ್ಲ ಸಿಬ್ಬಂದಿಯನ್ನು ಅಮಾನತುಗೊ ಳಿಸಬೇಕು ಎಂದು ಒತ್ತಾಯಿಸುವುದಾಗಿ ಎಐಎಸ್‌ಎ ಸಂಘಟನೆ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ಎಸಿಪಿ ಚಾಣಕ್ಯಪುರಿ ಅವರ ವಿರುದ್ಧ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯೆಗಾಗಿ ಸಂಪರ್ಕಿಸಿದಾಗ, ’ಇದೆಲ್ಲ ಆಧಾರ ರಹಿತ ಆರೋಪ’ ಎಂದು ಎಸಿಪಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಬಳಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನಮ್ಮ ಸಂಘಟನೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಡಪಕ್ಷದ ಅಂಗ ಸಂಸ್ಥೆ ಆಲ್‌ ಇಂಡಿಯಾ ಸ್ಟೂಡೆಂಟ್ಸ್‌ ಅಸೋಸಿಯೇಷನ್‌ (ಎಐಎಸ್‌ಎ) ಮಂಗಳವಾರ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.