ADVERTISEMENT

ಎಲ್ಲ ರೀತಿಯ ನೆರವು ನೀಡಲಿದ್ದೇವೆ: ಪ್ರವಾಹ ಪೀಡಿತ ಕೇರಳಕ್ಕೆ ಅಮಿತ್ ಶಾ ಭರವಸೆ

ನವದೆಹಲಿ (ಪಿಟಿಐ):
Published 17 ಅಕ್ಟೋಬರ್ 2021, 10:09 IST
Last Updated 17 ಅಕ್ಟೋಬರ್ 2021, 10:09 IST
ಅಮಿತ್ ಶಾ (ಪಿಟಿಐ ಚಿತ್ರ)
ಅಮಿತ್ ಶಾ (ಪಿಟಿಐ ಚಿತ್ರ)   

ನವದೆಹಲಿ: ಭಾರಿ ಮಳೆ ಹಾಗೂ ಪ್ರವಾಹ ಎದುರಿಸುತ್ತಿರುವ ಕೇರಳಕ್ಕೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಭಾರಿ ಮಳೆ ಮತ್ತು ಪ್ರವಾಹಕ್ಕೀಡಾಗಿರುವ ಕೇರಳದ ವಿವಿಧ ಪ್ರದೇಶಗಳ ಮೇಲೆ ನಿರಂತರ ನಿಗಾ ಇರಿಸಿದ್ದೇವೆ. ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡಲಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡಗಳು ಈಗಾಗಲೇ ಅಲ್ಲಿಗೆ ತಲುಪಿವೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇವೆ’ ಎಂದು ಶಾ ಟ್ವೀಟ್‌ ಮಾಡಿದ್ದಾರೆ.

ಎನ್‌ಡಿಆರ್‌ಎಫ್‌ನ 11 ತಂಡಗಳು ಕೇರಳದಲ್ಲಿ ಶೋಧ, ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಭಾರಿ ಮಳೆಯಿಂದಾಗಿ ಕೋಟಯಂ, ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಹಲವೆಡೆ ಭೂಕುಸಿತ ಸಂಭವಸಿದ್ದು, ಪ್ರವಾಹ ಉಂಟಾಗಿದೆ.

ADVERTISEMENT
ಸಾರಾಂಶ

ಭಾರಿ ಮಳೆ ಹಾಗೂ ಪ್ರವಾಹ ಎದುರಿಸುತ್ತಿರುವ ಕೇರಳಕ್ಕೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.