ನವದೆಹಲಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಕಳೆದ ತಿಂಗಳು ಮಾಡಿದ ಶಿಫಾರಿಸಿನ ಅನ್ವಯ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಸೇರಿದಂತೆ ಏಳು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದೆ.
ಅಕ್ಟೋಬರ್ 5 ರಂದು 11 ಹೈಕೋರ್ಟ್‌ಗಳ 15 ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಒಂದೇ ವಾರದಲ್ಲಿ ಎರಡನೇ ಬಾರಿ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ನ್ಯಾಯಮೂರ್ತಿಗಳ ಪಟ್ಟಿಯನ್ನು ಕಾನೂನು ಸಚಿವಾಲಯ ಟ್ವೀಟ್ ಮಾಡಿದೆ.
ಆ ಪ್ರಕಾರ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜನ್ ಗುಪ್ತಾ ಹಾಗೂ ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರನ್ನು ಪಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಈ ಮೂಲಕ ಇತ್ತೀಚೆಗಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಟ್ನಾ ನ್ಯಾಯಾಲಯಕ್ಕೆ ಮೂವರು ಹೊಸ ನ್ಯಾಯಮೂರ್ತಿಗಳು ದೊರೆತಂತಾಗಿದೆ.
ಉಳಿದಂತೆ, ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನು ಮದ್ರಾಸ್ ಹೈಕೋರ್ಟ್‌ನಿಂದ ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ, ಹಿಮಾಚಲ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಸುರೇಶ್ವರ್ ಠಾಕೂರ್ ಅವರನ್ನು ಪಂಜಾಬ್ ಮತ್ತು ಹರಿಯಾಣಕ್ಕೆ, ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಟಿ ಅಮರನಾಥ ಗೌಡ್ ಅವರನ್ನು ತ್ರಿಪುರಾಕ್ಕೆ ಕಳುಹಿಸಲಾಗಿದೆ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸುಭಾಷ್ ಚಂದ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.
ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಕಳೆದ ತಿಂಗಳು ಮಾಡಿದ ಶಿಫಾರಿಸಿನ ಅನ್ವಯ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಸೇರಿದಂತೆ ಏಳು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.