ಪಣಜಿ: ಗೋವಾದ ಮಾಜಿ ಸಿಎಂ ದಿವಂಗತ ಮನೋಹರ್ ಪರ್ರಿಕರ್ ಅವರ ಮಗ ಉತ್ಪಲ್ ಪರ್ರಿಕರ್ ಅವರಿಗೆ ಎಲ್ಲ ಬಾಗಿಲುಗಳನ್ನು ಮುಚ್ಚಿರುವ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ಬಿಚೋಲಿಮ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭಾ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.
‘ಪಟ್ನೇಕರ್ ಅವರು ಬಿಚೋಲಿಮ್ ಕ್ಷೇತ್ರದಲ್ಲಿ ಗೆಲ್ಲುವುದಷ್ಟೇ ಅಲ್ಲ, ಅವರು ಮುಂದಿನ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗುತ್ತಾರೆ’ಎಂದು ಪಕ್ಷವು ಪಟ್ನೇಕರ್ ಅವರ ಹೆಸರನ್ನು ಘೋಷಿಸಿದ ನಂತರ ಸಾವಂತ್ ಸುದ್ದಿಗಾರರಿಗೆ ತಿಳಿಸಿದರು.
ಮನೋಹರ್ ಪರ್ರಿಕರ್ ಪ್ರಪ್ರತಿನಿಧಿಸುತ್ತಿದ್ದ ಪಣಜಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಉತ್ಪಲ್‌ಗೆ ನೀಡಲು ಬಿಜೆಪಿ ನಿರಾಕರಿಸಿದ ನಂತರ, ಪಕ್ಷದ ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಅವರು ಉತ್ತರ ಗೋವಾದ ಬಿಚೋಲಿಮ್ ಸ್ಥಾನವನ್ನು ಉತ್ಪಲ್‌ಗೆ ನೀಡುವುದಾಗಿ ಬುಧವಾರ ಹೇಳಿದ್ದರು.
ಈ ಸ್ಥಾನವನ್ನು ಹಾಲಿ ಶಾಸಕ ಮತ್ತು ರಾಜ್ಯ ವಿಧಾನಸಭೆಯ ಸ್ಪೀಕರ್ ಪಟ್ನೇಕರ್ ಪ್ರತಿನಿಧಿಸುತ್ತಿದ್ದರು. ಕೆಲವು ದಿನಗಳ ಹಿಂದೆ, ಆರೋಗ್ಯ ಕಾರಣಗಳಿಗಾಗಿ 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಟ್ನೇಕರ್ ಹೇಳಿದ್ದರು.
ಬಿಜೆಪಿಯ ಔಪಚಾರಿಕ ಪ್ರಸ್ತಾಪವನ್ನು ತಿರಸ್ಕರಿಸಿದ ಉತ್ಪಲ್ ಅವರು ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು, ಬಿಜೆಪಿಯನ್ನು ಕೆಲವು ವ್ಯಕ್ತಿಗಳು ಹೈಜಾಕ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು.
40 ಸ್ಥಾನಗಳ ಗೋವಾ ವಿಧಾನಸಭೆಗೆ ಫೆಬ್ರುವರಿಯಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
‘ಪಟ್ನೇಕರ್ ಅವರು ಬಿಚೋಲಿಮ್ ಕ್ಷೇತ್ರದಲ್ಲಿ ಗೆಲ್ಲುವುದಷ್ಟೇ ಅಲ್ಲ, ಅವರು ಮುಂದಿನ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗುತ್ತಾರೆ’ಎಂದು ಪಕ್ಷವು ಪಟ್ನೇಕರ್ ಅವರನ್ನು ನಾಮನಿರ್ದೇಶನ ಮಾಡಿದ ನಂತರ ಸಾವಂತ್ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.