ADVERTISEMENT

ಪೂರ್ವ ದೆಹಲಿಯ ತ್ರಿಲೋಕಪುರಿಯಲ್ಲಿ ಅನುಮಾನಾಸ್ಪದ ಬ್ಯಾಗ್‌ಗಳು ಪತ್ತೆ, ಬಾಂಬ್ ಶಂಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 9:51 IST
Last Updated 19 ಜನವರಿ 2022, 9:51 IST
   

ನವದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿಯಲ್ಲಿ ಇಂದು ಮಧ್ಯಾಹ್ನ ಎರಡು ಅನುಮಾನಾಸ್ಪದ ಬ್ಯಾಗ್‌ಗಳು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಬಾಂಬ್ ಭೀತಿ ಉಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಬ್ಯಾಗ್‌ಗಳ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದ ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ತ್ರಿಲೋಕಪುರಿ ಬ್ಲಾಕ್ -15ರ ಮೆಟ್ರೋ ಪಿಲ್ಲರ್ ಸಂಖ್ಯೆ 59ರ ಬಳಿ ಎರಡು ಬ್ಯಾಗ್‌ಗಳು ಇರುವ ಬಗ್ಗೆ ಮಧ್ಯಾಹ್ನ 1 ಗಂಟೆಗೆ ಅವರಿಗೆ ಕರೆ ಬಂದಿತು.

ADVERTISEMENT

ಕಳೆದ ವಾರ, ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಚೀಲದಲ್ಲಿ ಆರ್‌ಡಿಎಕ್ಸ್ ಮತ್ತು ಅಮೋನಿಯಂ ನೈಟ್ರೇಟ್ ತುಂಬಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು.

ಸ್ಫೋಟಕವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ಇರಿಸಲಾಗಿತ್ತು. ನಂತರ ಐಇಡಿಯನ್ನು ನಿಯಂತ್ರಿತ ಸ್ಫೋಟ ತಂತ್ರವನ್ನು ಬಳಸಿ 8 ಅಡಿಯ ಗುಂಡಿಯಲ್ಲಿ ಇಳಿಸಿ ಸ್ಫೋಟಿಸುವ ಮೂಲಕ ನಾಶಪಡಿಸಲಾಗಿತ್ತು.

ಸಾರಾಂಶ

ಎರಡು ಬ್ಯಾಗ್‌ಗಳ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದ ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.