ADVERTISEMENT

ಬಿಎಸ್‌ಎಫ್‌ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ

ನವದೆಹಲಿ (ಪಿಟಿಐ):
Published 13 ಅಕ್ಟೋಬರ್ 2021, 20:50 IST
Last Updated 13 ಅಕ್ಟೋಬರ್ 2021, 20:50 IST

ನವದೆಹಲಿ: ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್‌) ಪಂಜಾಬ್‌, ಪಶ್ಚಿಮ ಬಂಗಾಳ, ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ 15 ಕಿ.ಮೀ ಬದಲಿಗೆ 50 ಕಿ.ಮೀ ಪ್ರದೇಶದ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ, ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ತಂದಿದೆ.

ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಗುಜರಾತ್‌ನಲ್ಲಿ ಈ ಮಿತಿಯನ್ನು 80 ಕಿ.ಮೀನಿಂದ 50 ಕಿ.ಮೀಗೆ ಇಳಿಸಲಾಗಿದೆ. ರಾಜಸ್ಥಾನದಲ್ಲಿ ಈಗಿರುವ 50 ಕಿ.ಮೀ ಮಿತಿಯನ್ನೇ ಮುಂದುವರಿಸಲಾಗಿದೆ.

ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳು ಸಹ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿದ್ದರೆ, ಅಸ್ಸಾಂ ಬಾಂಗ್ಲಾದೇಶದೊಂದಿಗೆ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ.

ADVERTISEMENT
ಸಾರಾಂಶ

ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್‌) ಪಂಜಾಬ್‌, ಪಶ್ಚಿಮ ಬಂಗಾಳ, ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ 15 ಕಿ.ಮೀ ಬದಲಿಗೆ 50 ಕಿ.ಮೀ ಪ್ರದೇಶದ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ, ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ತಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.