ನವದೆಹಲಿ: ಪಂಜಾಬ್ ಸೇರಿದಂತೆ ಇತರ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದ ಕೇಂದ್ರದ ಕ್ರಮವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧಿಸಿದ್ದು, ಇದೊಂದು ಸರ್ವಾಧಿಕಾರದ ಧೋರಣೆ ಎಂದಿದೆ.
'ನೀವು (ಕೇಂದ್ರ ಸರ್ಕಾರ) ಬಿಎಸ್‌ಎಫ್ ಪಡೆಯ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವ ಮೂಲಕ ರಾಜ್ಯ ಪೊಲೀಸರ ಅಧಿಕಾರ ವ್ಯಾಪ್ತಿಯನ್ನು ಕಡಿಮೆಗೊಳಿಸಿದ್ದೀರಿ. ಇದೊಂದು ರೀತಿಯ ದಾದಾಗಿರಿ ಮತ್ತು ಸರ್ವಾಧಿಕಾರ. ಇದನ್ನು ಯಾವುದೇ ಪಕ್ಷ ಅಥವಾ ಯಾವುದೇ ರಾಜ್ಯ ಸರ್ಕಾರ ಮತ್ತು ರಾಜ್ಯದ ಜನತೆ ಇಷ್ಟಪಡುವುದಿಲ್ಲ' ಎಂದು ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಗಡಿ ಹೊಂದಿರುವ ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ 15 ಕಿ.ಮೀ.ಯಷ್ಟಿದ್ದ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು 50 ಕಿ.ಮೀ.ಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್ ಕಾಯ್ದೆಯನ್ನು ಇತ್ತೀಚೆಗೆ ತಿದ್ದುಪಡಿ ಮಾಡಿದೆ.
'ಎಲ್ಲ ರಾಜ್ಯಗಳ ಸಹಯೋಗದೊಂದಿಗೆ ಈ ನಿರ್ಧಾರವನ್ನು ಕೇಂದ್ರ ಕೈಗೊಂಡಿದ್ದರೆ ಎಲ್ಲರೂ ಸ್ವಾಗತಿಸುತ್ತಿದ್ದರು. ಕೇಂದ್ರವು ರಾಜ್ಯಗಳ ಸಹಯೋಗದೊಂದಿಗೆ ಕೆಲಸ ಮಾಡಬೇಕು. ಸರ್ವಾಧಿಕಾರಿತನವನ್ನು ನಾವು ಪುರಸ್ಕರಿಸುವುದಿಲ್ಲ' ಎಂದು ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.
ಪಂಜಾಬ್ ಸೇರಿದಂತೆ ಇತರ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದ ಕೇಂದ್ರದ ಕ್ರಮವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧಿಸಿದ್ದು, ಇದೊಂದು ಸರ್ವಾಧಿಕಾರದ ಧೋರಣೆ ಎಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.