ಚಂಡೀಗಡ: ‘ಅಮೃತಸರದ ಭಾರತ–ಪಾಕಿಸ್ತಾನ ಗಡಿ ಪ್ರದೇಶದಲ್ಲಿ 7.25 ಕೆ.ಜಿ. ಹೆರಾಯಿನ್ ಅನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ’ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ತಂಡ ಬುಧವಾರ ಮಧ್ಯರಾತ್ರಿಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಗಡಿಯಲ್ಲಿ ವೈಮಾನಿಕ ಸಾಧನಗಳು ಹಾರಾಟ ನಡೆಸಿರುವ ಶಬ್ಧ ಕೇಳಿಬಂದಿತ್ತು ಎಂದು ಬಿಎಸ್ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ, ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಹಾರಾಟ ನಡೆಸುತ್ತಿದ್ದ ವೈಮಾನಿಕ ಸಾಧನಗಳತ್ತ ಗುಂಡು ಹಾರಿಸಿದೆ. ಇದೇ ವೇಳೆ ಒಟ್ಟು 7.25 ಕೆಜಿ ತೂಕದ ಏಳು ಪ್ಯಾಕೆಟ್ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬಿಎಸ್ಎಫ್ ತಿಳಿಸಿದೆ.
‘ಅಮೃತಸರದ ಭಾರತ–ಪಾಕಿಸ್ತಾನ ಗಡಿ ಪ್ರದೇಶದಲ್ಲಿ 7.25 ಕೆ.ಜಿ. ಹೆರಾಯಿನ್ ಅನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ’ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.