ನವದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಸೋಮವಾರದಿಂದ ಶೋಧ ಕಾರ್ಯ ಆರಂಭಿಸಿದೆ.
ಮುಂಬೈ ಮತ್ತು ನಾಗಪುರದಲ್ಲಿ ಮಾಜಿ ಸಚಿವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಆದರೆ, ಈ ಕುರಿತು ತನಿಖಾ ಸಂಸ್ಥೆ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.
ಅಪರಾಧ ಸಂಚು ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಅಡಿಯಲ್ಲಿ ಅನಿಲ್ ದೇಶಮುಖ್ ಮತ್ತು ಇತರೆ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶಮುಖ್ ವಿರುದ್ಧ ಆರೋಪಗಳು ಕೇಳಿಬಂದಿದ್ದವು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಸೋಮವಾರದಿಂದ ಶೋಧ ಕಾರ್ಯ ಆರಂಭಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.