ನವದೆಹಲಿ: ಕೋವಿಡ್–19 ಲಸಿಕೆ ಕೋವ್ಯಾಕ್ಸಿನ್ ಅನ್ನು 2 - 18 ವರ್ಷ ವಯೋಮಾನದವರಿಗೆ ನೀಡಲು ತಜ್ಞರ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ.
ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಕೋವಿಡ್–19 ಲಸಿಕೆಯನ್ನು 2ರಿಂದ 18 ವರ್ಷದವರಿಗೆ ನೀಡಬಹುದೆಂದು ವಿಷಯ ತಜ್ಞರ ಸಮಿತಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕಕ್ಕೆ (ಡಿಸಿಜಿಐ) ಶಿಫಾರಸು ಮಾಡಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿಯು ಡಿಸಿಜಿಐಗೆ ಅಕ್ಟೋಬರ್ 6ರಂದು ಸಲ್ಲಿಸಿತ್ತು.
ಕೋವಿಡ್–19 ಲಸಿಕೆ ಕೋವ್ಯಾಕ್ಸಿನ್ ಅನ್ನು 2 - 18 ವರ್ಷ ವಯೋಮಾನದವರಿಗೆ ನೀಡಲು ತಜ್ಞರ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.