ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ, ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಉಗ್ರರು ಅಡಗಿದ್ದಾರೆ ಎನ್ನುವ ಖಚಿತ ಮಾಹಿತಿ ಮೆರೆಗ ದಕ್ಷಿಣ ಕಾಶ್ಮೀರದ ಪುಲ್ವಾಮ ಪ್ರದೇಶದಲ್ಲಿ ಉಗ್ರರ ವಿರುದ್ಧ ಸೇನಾ ಪಡೆಗಳು ಹುಡುಕಾಟ ಕಾರ್ಯಾಚರಣೆ ಆರಂಭಿಸಿತ್ತು.
ಕಾರ್ಯಾಚರಣೆ ವೇಳೆ ಉಗ್ರರು, ಸೇನಾಪಡೆಗಳ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದಕ್ಕೆ ಸೇನಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಗುಂಡಿನ ಚಕಮಕಿ ಮುಂದುವರಿದಿದ್ದು, ಎರಡೂ ಕಡೆಯಿಂದ ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿ ಬಂದಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.