ನವದೆಹಲಿ: ಗೋವಾ ವಿಧಾನಸಭೆಯಲ್ಲಿ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್, ಬಿಜೆಪಿಯೇತರ ಮತಗಳನ್ನು ವಿಭಜಿಸುತ್ತವೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗೋವಾದ ಕಾಂಗ್ರೆಸ್ ಉಸ್ತುವಾರಿ ಪಿ. ಚಿದಂಬರಂ ಅವರು ಈ ಆರೋಪ ಮಾಡಿದ್ದು, ಜನರು ಬಿಜೆಪಿಗೆ ಇಲ್ಲವೇ ಇತರ ಪಕ್ಷಗಳಿಗೆ ಮತ ಹಾಕುತ್ತಾರೆ. ಇದರಿಂದ ಬಿಜೆಪಿ ಹೊರತಾದ ಮತಗಳು ಹಂಚಿಹೋಗುತ್ತದೆ ಎಂದು ಹೇಳಿದ್ದಾರೆ.
ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಇದೆ. ಅಲ್ಲಿ ಬದಲಾವಣೆ ಬಯಸುವವರು ಕಾಂಗ್ರೆಸ್‌ಗೆ ಮತ ನೀಡುತ್ತಾರೆ. ಆದರೆ ಇದೇ ಆಡಳಿತವೇ ಸಾಕು ಎನ್ನುವವರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜನರು ಬದಲಾವಣೆ ಬಯಸುವುದಾದಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಚಿದಂಬರಂ ಅವರು ಗೋವಾದ ಮತದಾರರಲ್ಲಿ ಕೇಳಿಕೊಂಡಿದ್ದಾರೆ.
ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಸ್ಪರ್ಧೆ ಇದ್ದರೂ, ಆಮ್ ಆದ್ಮಿ ಪಾರ್ಟಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಪರ್ಧೆಯಿಂದ ಕಾಂಗ್ರೆಸ್‌ಗೆ ಸಮಸ್ಯೆಯಾಗಲಿದೆ ಎನ್ನುವ ಮಾತು ಕೇಳಿಬಂದಿದೆ.
ಗೋವಾ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಚಿದಂಬರಂ ಹೇಳಿಕೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.