ಸೂರತ್, ಗುಜರಾತ್ (ಪಿಟಿಐ): ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಐದು ಅಂತಸ್ತಿನ ಸಾಮಾನುಗಳ ಪ್ಯಾಕಿಂಗ್ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕಡೋದರ ಕೈಗಾರಿಕ ಪ್ರದೇಶದಲ್ಲಿನ ಘಟಕದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ಅಲ್ಲಿ ಸಿಲುಕಿದ್ದ 70ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಕೆಲವು ಕಾರ್ಮಿಕರೂ ಗಾಯಗೊಂಡಿದ್ದಾರೆ ಎಂದೂ ಅವರು ಹೇಳಿದರು.
ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬೆಳಗಿನ ಜಾವ 4.30ರ ಸುಮಾರಿಗೆ ವಿವಾ ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕಡೋದರ ಪೊಲೀಸ್ ಇನ್‌ಸ್ಪೆಕ್ಟರ್ ಹೇಮಂತ್ ಪಟೇಲ್ ತಿಳಿಸಿದರು.
ಘಟಕದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ನಂತರ ಅದು ಇತರ ಮಹಡಿಗಳಿಗೆ ವೇಗವಾಗಿ ಹರಡಿತು. ಕಟ್ಟಡದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಹೈಡ್ರಾಲಿಕ್ ಕ್ರೇನ್‌ಗಳನ್ನು ಬಳಸಲಾಗಿದೆ ಎಂದು ಅವರು ಹೇಳಿದರು.
ಬೆಂಕಿ ಹೊತ್ತಿಕೊಂಡ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದರು.
ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಐದು ಅಂತಸ್ತಿನ ಸಾಮಾನುಗಳ ಪ್ಯಾಕಿಂಗ್ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.