ಮುಂಬೈ: ‘ಮುಂದಿನ ವರ್ಷದ ಹಜ್ ಯಾತ್ರೆಗೆ ಸಂಬಂಧಿಸಿ ಭಾರತದಲ್ಲಿನ ಪ್ರಕ್ರಿಯೆಗಳು ಸಂಪೂರ್ಣ ಡಿಜಿಟಲ್ ವಿಧಾನದ ಮೂಲಕವೇ ನಡೆಯಲಿವೆ’ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಇಲ್ಲಿನ ‘ಹಜ್ ಹೌಸ್’ನಲ್ಲಿ ಆನ್‌ಲೈನ್ ಮೂಲಕ ಬುಕ್ಕಿಂಗ್ ಸೌಲಭ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ವರ್ಷದ ಹಜ್ ಯಾತ್ರೆ ಕುರಿತು ಘೋಷಣೆ ಮಾಡಲಾಗುವುದು. ಈ ಸಂಬಂಧ ಚರ್ಚಿಸಲು ಅ.21ರಂದು ನವದೆಹಲಿಯಲ್ಲಿ ಪರಿಶೀಲನಾ ಸಭೆ ನಡೆಸಲು ನಿರ್ಧರಿಸಲಾಗಿದೆ’ ಎಂದೂ ಅವರು ಹೇಳಿದರು.
‘ಇಂಡೊನೇಷ್ಯಾ ನಂತರ ಭಾರತದಿಂದಲೇ ಅತಿ ಹೆಚ್ಚಿನ ಸಂಖ್ಯೆಯ ಯಾತ್ರಿಗಳು ಹಜ್‌ಗೆ ತೆರಳುವುದಾಗಿ ಸಚಿವ ನಖ್ವಿ ಹೇಳಿದರು’ ಎಂದು ಕಾರ್ಯಕ್ರಮದ ನಂತರ ಬಿಡುಗಡೆಯಾದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಕೋವಿಡ್–19 ಪಿಡುಗಿನ ಕಾರಣದಿಂದಾಗಿ ಸೌದಿ ಅರೇಬಿಯಾ ಸರ್ಕಾರ ಕೈಗೊಂಡ ನಿರ್ಧಾರದಂತೆ 2020 ಹಾಗೂ ಪ್ರಸಕ್ತ ವರ್ಷ ಹಜ್ ಯಾತ್ರೆ ನಡೆಯಲಿಲ್ಲ’ ಎಂದೂ ಹೇಳಿದರು.
‘ಮುಂದಿನ ವರ್ಷದ ಹಜ್ ಯಾತ್ರೆಗೆ ಸಂಬಂಧಿಸಿ ಭಾರತದಲ್ಲಿನ ಪ್ರಕ್ರಿಯೆಗಳು ಸಂಪೂರ್ಣ ಡಿಜಿಟಲ್ ವಿಧಾನದ ಮೂಲಕವೇ ನಡೆಯಲಿವೆ’ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.