ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3.47 ಲಕ್ಷ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 703 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಸದ್ಯ ಶೇ 17.94ರಷ್ಟಿದೆ.
ಈವರೆಗೆ 9,692 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಗುರುವಾರಕ್ಕೆ ಹೋಲಿಸಿದರೆ ಓಮೈಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಶುಕ್ರವಾರ ಶೇ 4.36ರ ಹೆಚ್ಚಳ ಕಂಡುಬಂದಿದೆ.
ಈ ಮಧ್ಯೆ, 6.5 ಕೋಟಿ ಜನ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಎರಡನೇ ಡೋಸ್ ತೆಗೆದುಕೊಳ್ಳಲು ಬಾಕಿ ಇರುವವರು ಅದನ್ನು ಪಡೆಯುವಂತೆ ಸಲಹೆ ನೀಡಿದೆ.
ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 3.47 ಲಕ್ಷ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 703 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.