ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ.
ಅದೇ ರೀತಿ ಸ್ಥಳೀಯರಲ್ಲದವರು ಪೊಲೀಸ್ ಠಾಣೆಗಳಿಗೆ ಬರಬೇಕೆಂದು ಸೂಚಿಸಲಾಗಿದೆ ಎಂದೂ ವರದಿಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್, ʼಅಂತಹ ಯಾವುದೇ ಆದೇಶ ಹೊರಡಿಸಿಲ್ಲ. ಇದು ಸುಳ್ಳು ಸುದ್ದಿʼ ಎಂದು ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 5ರಂದು ಶ್ರೀನಗರದ ಪ್ರಮುಖ ಔಷಧ ಅಂಗಡಿ ಮಾಲೀಕ ಮಖಾನ್ ಲಾಲ್ ಬಿಂದ್ರೂ ಎನ್ನುವವರನ್ನು ಉಗ್ರರು ಹತ್ಯೆ ಮಾಡಿದ್ದರು. ಅದಾದ ನಂತರ ಕಣಿವೆ ರಾಜ್ಯದಾದ್ಯಂತ ಉಗ್ರರು ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ.
ಇವನ್ನೂ ಓದಿ
* ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್ ಸಿನ್ಹಾ
* ಕಾಶ್ಮೀರ: ಉಗ್ರರಿಂದ ಇಬ್ಬರು ವಲಸೆ ಕಾರ್ಮಿಕರ ಗುಂಡಿಕ್ಕಿ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.