ತಿರುವನಂತಪುರ: ವಿಧಾನಸಭಾ ಅಧಿವೇಶನ ವೇಳೆ ನಡೆದ ಗದ್ದಲ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ದೂರನ್ನು ರದ್ದುಗೊಳಿಸುವಂತೆ ಕೋರಿ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆಡಳಿತಾರೂಢ ಎಲ್‌ಡಿಎಫ್‌ಗೆ ಹಿನ್ನಡೆಯಾದಂತಾಗಿದೆ.
‘ಸಚಿವ ಹಾಗೂ ಇತರ ಐವರು ಆರೋಪಿಗಳು ನವೆಂಬರ್ 22ರಂದು ಕೋರ್ಟ್‌ಗೆ ಹಾಜರಾಗಬೇಕು’ ಎಂದು ನ್ಯಾಯಾಧೀಶರು ನಿರ್ದೇಶನ ನೀಡಿದರು.
ವಿಧಾನಸಭಾ ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಮತ್ತು ಇತರರ ವಿರುದ್ಧ ಸಲ್ಲಿಸಲಾಗಿದ್ದ ದೂರನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಗೊಳಿಸಿದ್ದು, ಈ ಮೂಲಕ ಆಡಳಿತಾರೂಢ ಎಲ್‌ಡಿಎ ಪಕ್ಷಕ್ಕೆ ಹಿನ್ನಡೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.