ತಿರುವನಂತಪುರ: ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ.
‘ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ ಕೆಲವರು ಪ್ರಾಣ ಕಳೆದುಕೊಂಡಿರುವುದು ಬೇಸರದ ಸಂಗತಿ. ಈ ವಿಚಾರವಾಗಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಮಾತುಕತೆ ನಡೆಸಿದ್ದೇನೆ. ಗಾಯಾಳುಗಳು ಮತ್ತು ಮಳೆ, ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ನೆರವಾಗಲು ಅಧಿಕಾರಿಗಳು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ಮಳೆ, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಅಕ್ಟೋಬರ್ 20ರಿಂದ ಕೇರಳದಲ್ಲಿ ಮತ್ತೆ 3–4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.