ಮುಂಬೈ: ದೀರ್ಘಕಾಲದಿಂದ ಜೈಲಿನಲ್ಲಿರುವ, ತಮ್ಮ ಜಾಮೀನು ಮೊತ್ತವನ್ನು ಪಾವತಿಸಲು ಸಾಧ್ಯವಾಗದ ಹಾಗೂ ಅಗತ್ಯ ಕಾನೂನು ಅವಶ್ಯಕತೆಗಳನ್ನು ಪೂರೈಸಲಾಗದ ಮಹಿಳಾ ಕೈದಿಗಳ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಯೋಜನೆಯೊಂದನ್ನು ಆರಂಭಿಸಲಿದೆ.
'ಮುಕ್ತ' ಎಂಬ ಹೆಸರಿನ ಈ ಯೋಜನೆ, ಸಣ್ಣ ಪುಟ್ಟ ಅಪರಾಧಗಳನ್ನು ಮಾಡಿ ಜೈಲುಗಳಲ್ಲಿರುವ ಮಹಿಳಾ ಕೈದಿಗಳಿಗೆ ಪರಿಹಾರ ನೀಡುತ್ತದೆ ಮತ್ತು ಜೈಲುಗಳ ಮೇಲಿನ ಹೊರೆಯನ್ನೂ ಕಡಿಮೆ ಮಾಡುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
’ಅನೇಕ ಮಹಿಳೆಯರ ವಿರುದ್ಧ ಸಣ್ಣ ಪುಟ್ಟ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರೆಲ್ಲ ಬಹಳ ವರ್ಷಗಳಿಂದ ಜೈಲಿನಲ್ಲಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ. ಇಂಥ ಮಹಿಳಾ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ’ಮುಕ್ತ’ ಎಂಬ ಯೋಜನೆಯನ್ನು ಆರಂಭಿಸಲು ಯೋಜಿಸುತ್ತಿದೆ. ಇದು ಜಾಮೀನು ಆದೇಶಗಳ ನಂತರವೂ, ಬಿಡುಗಡೆಯ ಮೊತ್ತವನ್ನು ಪಾವತಿಸಲು ಸಾಧ್ಯವಾಗದೇ ಜೈಲಿನಲ್ಲೇ ಇರುವ ಮಹಿಳೆಯರಿಗೆ ಪ್ರಯೋಜನಕಾರಿಯಾಗಲಿದೆ’ ಎಂದು ಹೇಳಿದರು.
ದೀರ್ಘಕಾಲದಿಂದ ಜೈಲಿನಲ್ಲಿರುವ, ತಮ್ಮ ಜಾಮೀನು ಮೊತ್ತವನ್ನು ಪಾವತಿಸಲು ಸಾಧ್ಯವಾಗದ ಹಾಗೂ ಅಗತ್ಯ ಕಾನೂನು ಅವಶ್ಯಕತೆಗಳನ್ನು ಪೂರೈಸಲಾಗದ ಮಹಿಳಾ ಕೈದಿಗಳ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಯೋಜನೆಯೊಂದನ್ನು ಆರಂಭಿಸಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.