ADVERTISEMENT

ಉತ್ತರ ಪ್ರದೇಶ: ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಂವಾದ

ಐಎಎನ್ಎಸ್
Published 18 ಜನವರಿ 2022, 3:02 IST
Last Updated 18 ಜನವರಿ 2022, 3:02 IST
 ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ    

ನವದೆಹಲಿ: ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಅವರ ಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಯ ಬಿಜೆಪಿ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ, ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮತ್ತು ವಾರಾಣಸಿಯಲ್ಲಿನ ಕಾರ್ಯಕರ್ತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಕಾಶಿ ಘಟಕದ ಅಧ್ಯಕ್ಷ ಮಹೇಶ್ ಚಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಕುರಿತಂತೆ, ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು ಆ್ಯಪ್ ಮೂಲಕ ಪ್ರಧಾನಿಯವರ ಜತೆ ಹಂಚಿಕೊಳ್ಳಬಹುದಾಗಿದೆ.

ADVERTISEMENT

ಕೋವಿಡ್ ನಿರ್ಬಂಧಗಳು ಇರುವುದರಿಂದ, ಜನರ ಜತೆ ಸಂವಾದ ನಡೆಸಲು ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಮಹೇಶ್‌ ಚಂದ್ರ ಹೇಳಿದ್ದಾರೆ.

ಸಾರಾಂಶ

ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.