ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯಗಳ ಸಂಬಂಧ ಪಂಜಾಬ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಅಕ್ಟೋಬರ್ 15ರಂದೇ ಸಿಧು ಪತ್ರ ಬರೆದಿದ್ದು, ಇಂದು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು, 'ಎಲ್ಲವೂ ಬಗೆಹರಿದಿದೆ' ಎಂದು ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ.
ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಿಗದಿಯಾಗಿದ್ದು, ಹದಿಮೂರು ಅಂಶಗಳನ್ನು ಒಳಗೊಂಡ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸಲು ಸಭೆ ಸೇರುವ ಕುರಿತು ಸೋನಿಯಾ ಅವರಿಗೆ ಸಿಧು ಪತ್ರ ಬರೆದಿದ್ದಾರೆ.
ಧರ್ಮ ಅಪವಿತ್ರಗೊಳಿಸಿದ ಪ್ರಕರಣಗಳಲ್ಲಿ ನ್ಯಾಯ, ಪಂಜಾಬ್‌ನ ಡ್ರಗ್ಸ್ ಕಿರುಕುಳ, ಕೃಷಿ ವಿಚಾರಗಳು, ಉದ್ಯೋಗ ಅವಕಾಶಗಳು, ಮರಳು ಗಣಿಗಾರಿಕೆ ಹಾಗೂ ಹಿಂದುಳಿದ ವರ್ಗಗಳ ಉನ್ನತಿ ಕುರಿತ ಅಂಶಗಳು ಪಕ್ಷದ ಪ್ರಚಾರ ಕಾರ್ಯಸೂಚಿಯಲ್ಲಿವೆ.
ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯಗಳ ಸಂಬಂಧ ಪಂಜಾಬ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಅಕ್ಟೋಬರ್ 15ರಂದೇ ಸಿಧು ಪತ್ರ ಬರೆದಿದ್ದು, ಇಂದು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು, 'ಎಲ್ಲವೂ ಬಗೆಹರಿದಿದೆ' ಎಂದು ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.