ಚಂಡೀಗಡ: ಪಂಜಾಬ್ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಂತೆ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿ ಪ್ರಮುಖ ಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿವೆ. ಆದರೆ ಕಾಂಗ್ರೆಸ್ ಈವರೆಗೂ ಅಂತಹ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿ ಸಬೇಕು ಎಂಬ ಒತ್ತಡದಲ್ಲಿ ಕಾಂಗ್ರೆಸ್ ಇದೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆದಷ್ಟು ಬೇಗ ಘೋಷಿಸಬೇಕು ಎಂಬ ಕೂಗು ರಾಜ್ಯ ಕಾಂಗ್ರೆಸ್‌ನ ಒಳಗಿನಿಂದಲೇ ಕೇಳಿಬರುತ್ತದೆ. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ರಾಜ್ಯದ ಕೆಲವು ಸಚಿವರು ಒತ್ತಾಯಿಸಿದ್ದಾರೆ.
ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪಂಜಾಬ್ ಸಚಿವ, ಕಾಂಗ್ರೆಸ್ ನಾಯಕ ಬ್ರಹ್ಮ್ ಮೊಹಿಂದ್ರಾ ಒತ್ತಾಯಿಸಿದ್ದಾರೆ. ಜೊತೆಗೆ, ಚನ್ನಿ ಅವರೇ ಸೂಕ್ತ ಅಭ್ಯರ್ಥಿ ಎಂದು ಒತ್ತಿ ಹೇಳಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಂತೆ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿ ಪ್ರಮುಖ ಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿವೆ. ಆದರೆ ಕಾಂಗ್ರೆಸ್ ಈವರೆಗೂ ಅಂತಹ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿ ಸಬೇಕು ಎಂಬ ಒತ್ತಡದಲ್ಲಿ ಕಾಂಗ್ರೆಸ್ ಇದೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.