ಕೋಲ್ಕತ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಉತ್ತರ ಪ್ರದೇಶದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂದು ಸಮಾಜವಾದಿ ಪಕ್ಷದ ಪರ ಪ್ರಚಾರ ಮಾಡಬೇಕು ಎಂದು ಎಸ್‌ಪಿ ಉಪಾಧ್ಯಕ್ಷರಾದ ಕಿರಣ್ಮಯಿ ನಂದಾ ಹೇಳಿದ್ದಾರೆ.
ಮಂಗಳವಾರ ಮಮತಾ ಬ್ಯಾನರ್ಜಿ ಅವರನ್ನು ಕಿರಣ್ಮಯಿ ಅವರು ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣೆ ಕುರಿತು ಚರ್ಚೆಯ ಜತೆಗೆ ಪ್ರಚಾರ ಕಾರ್ಯಕ್ಕೆ ಉತ್ತರ ಪ್ರದೇಶಕ್ಕೆ ಆಗಮಿಸುವಂತೆ ಅವರು ಕೋರಿಕೆ ಸಲ್ಲಿಸಲಿದ್ದಾರೆ.
ಪಶ್ವಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಅತ್ಯಂತ ಉತ್ಸಾಹದಿಂದ ಹೋರಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶಕ್ಕೂ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಬರಬೇಕು ಎಂದು ನಮ್ಮ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಶಿಸಿದ್ದಾರೆ ಎಂದು ಕಿರಣ್ಮಯಿ ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಜತೆ ಅಖಿಲೇಶ್ ಯಾದವ್ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದಾರೆ.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಫೆಬ್ರುವರಿ 10ಕ್ಕೆ ಆರಂಭವಾಗಿ, ಮಾರ್ಚ್ 7ಕ್ಕೆ ಮುಕ್ತಾಯವಾಗಲಿದೆ.
ಸಮಾಜವಾದಿ ಪಾರ್ಟಿ, ಉತ್ತರ ಪ್ರದೇಶ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.