ನವದೆಹಲಿ: ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡಿರುವ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಗೆ ನೀಡಿತು.
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠಕ್ಕೆ ವಕೀಲ ಎಂ.ಎಲ್.ಶರ್ಮಾ ಎಂಬುವವರು ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
‘ಇವಿಎಂಗಳ ಬಳಕೆಗೆ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 61ಎ ಅವಕಾಶ ಕಲ್ಪಿಸುತ್ತದೆ. ಆದರೆ, ಕಾಯ್ದೆಯ ಈ ನಿಯಮವನ್ನು ಸಂಸತ್‌ನಲ್ಲಿ ಅಂಗೀಕರಿಸಿಲ್ಲ. ಹೀಗಾಗಿ ಈ ನಿಯಮವನ್ನು ಜಾರಿಗೊಳಿಸಬಾರದು’ ಎಂದು ಶರ್ಮಾ ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.
ಚುನಾವಣೆಗಳಲ್ಲಿ ಮತಪತ್ರಗಳ ಬದಲಾಗಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡಿರುವ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಗೆ ನೀಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.