ADVERTISEMENT

ಮೃತಪಟ್ಟವ ‘ಹೆಲ್ಪರ್‌’ ಎಂದು ವಿಮಾ ರಕ್ಷಣೆಯಿಂದ ವಂಚಿಸುವಂತಿಲ್ಲ: ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 19:09 IST
Last Updated 15 ಜನವರಿ 2022, 19:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಹೆಲ್ಪರ್‌’ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ ವಿಮಾ ರಕ್ಷಣೆಯನ್ನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್‌ ತೀರ್ಪು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ತೀರ್ಪನ್ನು ಬದಿಗಿರಿಸಿದೆ. 

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ.ರಾಮಸುಬ್ರಮಣಿಯನ್ ಅವರ ಪೀಠವು ‘ಹೆಲ್ಪರ್‌’ ಮತ್ತು ‘ಕ್ಲೀನರ್’ ಕರ್ತವ್ಯಗಳ ಬಗ್ಗೆ ಸ್ಪಷ್ಟವಾದ ಗಡಿರೇಖೆಯಿಲ್ಲ ಎಂದು ಹೇಳಿದೆ.

ಪ್ರಕರಣದ ವಿವರ: ಕೊಳವೆ ಬಾವಿ ಕೊರೆಯುವ ವಾಹನದಲ್ಲಿ ‘ಹೆಲ್ಪರ್‌’ ಆಗಿದ್ದ ತೇಜ್‌ ಸಿಂಗ್‌ ಎಂಬುವವರು, ಬಾವಿಯ ಮಣ್ಣಿನ ಕುಸಿತದ ಸಂದರ್ಭದಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ದಾಖಲಾದ ಅರ್ಜಿಯ ವಿಚಾರಣೆ ನಡೆಸಿದ ಕಾರ್ಮಿಕರ ಆಯುಕ್ತರು, ₹3,27,555 ಪರಿಹಾರ ಹಾಗೂ ಅಂತ್ಯ ಸಂಸ್ಕಾರದ ವೆಚ್ಚವಾಗಿ ₹2,500 ಪಾವತಿಸುವಂತೆ ಆದೇಶಿಸಿದರು. ಅಪಘಾತದ ದಿನಾಂಕದಿಂದ ಶೇ 18ರಷ್ಟು ಬಡ್ಡಿಯನ್ನು ಮೃತರ ಕಾನೂನುಬದ್ಧ ವಾರಸುದಾರರಿಗೆ ನೀಡುವಂತೆ ಆದೇಶಿಸಲಾಗಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ ವಿಮಾ ಕಂಪನಿಯು ಅಪಘಾತದಲ್ಲಿ ಮೃತಪಟ್ಟವರು ‘ಹೆಲ್ಪರ್‌’ ಆಗಿದ್ದಾರೆ, ಆದರೆ ವಿಮಾ ರಕ್ಷಣೆ ಇರುವುದು ‘ಕ್ಲೀನರ್‌’ಗೆ ಎಂದು ವಾದಿಸಿತ್ತು. ಕಂಪನಿಯ ವಾದವನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು.

ADVERTISEMENT
ಸಾರಾಂಶ

‘ಹೆಲ್ಪರ್‌’ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ ವಿಮಾ ರಕ್ಷಣೆಯನ್ನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್‌ ತೀರ್ಪು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ತೀರ್ಪನ್ನು ಬದಿಗಿರಿಸಿದೆ.  ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ.ರಾಮಸುಬ್ರಮಣಿಯನ್ ಅವರ ಪೀಠವು ‘ಹೆಲ್ಪರ್‌’ ಮತ್ತು ‘ಕ್ಲೀನರ್’ ಕರ್ತವ್ಯಗಳ ಬಗ್ಗೆ ಸ್ಪಷ್ಟವಾದ ಗಡಿರೇಖೆಯಿಲ್ಲ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.