ಬಂಡಿಪೋರ/ಅನಂತನಾಗ (ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದ ಅನಂತನಾಗ ಮತ್ತು ಬಂಡಿಪೋರ ಜಿಲ್ಲೆಗಳಲ್ಲಿ ಭಾನುವಾರ ತಡ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರರನ್ನು ಹೊಡೆದುರುಳಿಸಿವೆ.
ಈ ಪೈಕಿ ಬಂಡಿಪೋರದಲ್ಲಿ ಕೊಲ್ಲಲ್ಪಟ್ಟ ಉಗ್ರನು, ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಡಿಜಿಪಿ ದಿಲ್‌ಬಾಗ್ ಸಿಂಗ್ ತಿಳಿಸಿದರು. ಆತನನ್ನು ಇಮ್ತಿಯಾಜ್ ಅಹ್ಮದ್ ದರ್ ಎಂದು ಗುರುತಿಸಲಾಗಿದೆ. ಈತ ಲಷ್ಕರ್ ಏ ತೋಯ್ಬಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಅನಂತನಾಗ ಜಿಲ್ಲೆಯ ವೆರಿನಾಗ ಎಂಬಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜಮ್ಮು- ಕಾಶ್ಮೀರ: ನಾಗರಿಕರೇ ಈಗ ಉಗ್ರರ ಗುರಿ
ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಎರಡೂ ಜಿಲ್ಲೆಗಳಲ್ಲಿ ಭಾನುವಾರ ರಾತ್ರಿ ಕಾರ್ಯಾಚರಣೆ ಕೈಗೊಂಡಿದ್ದವು.
ಐದು ದಿನಗಳಲ್ಲಿ ಏಳು ನಾಗರಿಕರ ಹತ್ಯೆ
ಕಳೆದ ಐದು ದಿನಗಳಲ್ಲಿ ಉಗ್ರರು ಒಬ್ಬ ಶಿಕ್ಷಕ ಸೇರಿ ಏಳು ಮಂದಿ ನಾಗರಿಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಸರಣಿ ಹತ್ಯೆಗಳನ್ನು ನಿಲ್ಲಿಸುವುದಕ್ಕಾಗಿ ಭದ್ರತಾ ಪಡೆಗಳು ತ್ವರಿತ ಕಾರ್ಯಾಚರಣೆ ನಡೆಸುತ್ತಿವೆ.
ಇದನ್ನೂ ಓದಿ: ಶ್ರೀನಗರ: ನಾಗರಿಕರ ಹತ್ಯೆ ಪ್ರಕರಣದಲ್ಲಿ 400 ಮಂದಿ ಬಂಧನ
ಪ್ರತ್ಯೇಕತಾವಾದಿಗಳ ಸಂಪರ್ಕ ಹೊಂದಿರುವ ಆರೋಪದ ಮೇಲೆ ಈವರೆಗೆ ಸುಮಾರು 400ಕ್ಕೂ ಹೆಚ್ಚು ಜನರನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ ಮತ್ತು ಬಂಧಿಸಿವೆ. ಜಮಾತ್–ಎ–ಇಸ್ಲಾಮಿ, ತೆಹ್ರೀಕ್–ಎ–ಹುರಿಯತ್ ಸಂಘಟನೆಗಳ ಸದಸ್ಯರು, ಭೂಗತರಾಗಿ ಭಯೋತ್ಪಾದಕ ಕಾರ್ಯಾಚರಣೆ ನಡೆಸುವವರು, ಭದ್ರತಾ ಪಡೆ ಮತ್ತು ನಾಗರಿಕರ ಮೇಲೆ ಕಲ್ಲು ತೂರಾಟ ಮಾಡಿದ್ದವರು ಬಂಧಿತರಲ್ಲಿ ಸೇರಿದ್ದಾರೆ.
ಇದನ್ನೂ ಓದಿ: ಜಮ್ಮು- ಕಾಶ್ಮೀರ: ಶಿಕ್ಷಕರು ಸೇರಿ ಮೂವರ ಕೊಂದ ಉಗ್ರರು
ಜಮ್ಮು ಕಾಶ್ಮೀರದ ಅನಂತನಾಗ ಮತ್ತು ಬಂಡಿಪೋರ ಜಿಲ್ಲೆಗಳಲ್ಲಿ ಭಾನುವಾರ ತಡ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರರನ್ನು ಹೊಡೆದುರುಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.