ADVERTISEMENT

ಜನರಲ್ಲಿ ಭಯ ಮೂಡಿಸಲು ಹತ್ಯೆಯನ್ನು ಗುರಿಯಾಗಿಸಿಕೊಂಡ ಉಗ್ರರು: ಮೋಹನ್‌ ಭಾಗವತ್‌

ನವದೆಹಲಿ (ಪಿಟಿಐ):
Published 15 ಅಕ್ಟೋಬರ್ 2021, 5:14 IST
Last Updated 15 ಅಕ್ಟೋಬರ್ 2021, 5:14 IST
ಮೋಹನ್‌ ಭಾಗವತ್
ಮೋಹನ್‌ ಭಾಗವತ್   

ನಾಗಪುರ: ಜನರಲ್ಲಿ ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆಸುವುದನ್ನು, ಹತ್ಯೆ ಮಾಡುವುದನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶುಕ್ರವಾರ ಹೇಳಿದರು.

ಇಲ್ಲಿನ ರೇಷಿಂಬಾಗ್‌ ಮೈದಾನದಲ್ಲಿ ವಿಜಯದಶಮಿಯ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಂಡಿದ್ದ ಅವರು, ಗಡಿಯಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಿ ಅವರು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದರು.

ಬಿಟ್‌ ಕಾಯಿನ್‌ ಮತ್ತು ಒಟಿಟಿ  ವೇದಿಕೆ ಕುರಿತು ಪ್ರಸ್ತಾಪಿಸಿದ ಅವರು ಇವುಗಳ ಮೇಲೆ ನಿಯಂತ್ರಣ ಹೇರಲು ಸರ್ಕಾರ ಪ್ರಯತ್ನಿಸಬೇಕು ಎಂದೂ ಸಲಹೆ ನೀಡಿದರು.

ಅ. 12ರಂದು ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.

ಸಾರಾಂಶ

ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ದಾಳಿಗೆ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶುಕ್ರವಾರ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.