ADVERTISEMENT

ಪ್ರಧಾನಿ ಮೋದಿ ಮೌನದಿಂದ ಚೀನಾ ಸೇನೆ ಅತಿಕ್ರಮಣ ಹೆಚ್ಚುತ್ತಿದೆ: ರಾಹುಲ್ ಗಾಂಧಿ

ಪ್ರಜಾವಾ‌ಣಿ ವೆಬ್ ಡೆಸ್ಕ್‌
Published 19 ಜನವರಿ 2022, 8:15 IST
Last Updated 19 ಜನವರಿ 2022, 8:15 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೌನದಿಂದ ಪಕ್ಕದ ಚೀನಾದ ಗಡಿ ಆಕ್ರಮಣ ಉತ್ಸಾಹ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ಯಾಂಗಾಂಗ್ ಸರೋವರದ ಬಳಿ ಭಾರತದ ಜಾಗದಲ್ಲಿ ಚೀನಾ ಸೇತುವೆ ನಿರ್ಮಿಸುತ್ತಿದೆ ಎನ್ನಲಾದ ಉಪಗ್ರಹ ಆಧಾರಿತ ವಿಡಿಯೊ ಒಂದನ್ನು ಬುಧವಾರ ಟ್ವಿಟರ್‌ನಲ್ಲಿ ಹಂಚಿಕೊಂಡು ಅವರು ಈ ಆರೋಪ ಮಾಡಿದ್ದಾರೆ.

‘ಚೀನಾ ನಮ್ಮ ದೇಶದಲ್ಲಿ ರಾಜತಾಂತ್ರಿಕ ಸೇತುವೆಯನ್ನು ನಿರ್ಮಿಸುತ್ತಿದೆ. ಪ್ರಧಾನಿಯವರ ಮೌನದಿಂದಾಗಿ ಪಿಎಲ್‌ಎ (ಚೀನಾ ಸೇನೆ) ಉತ್ಸಾಹ ಹೆಚ್ಚುತ್ತಿದೆ. ಈ ಸೇತುವೆಯನ್ನು ಉದ್ಘಾಟನೆ ಮಾಡಲು ನಮ್ಮ ಪ್ರಧಾನಿ ಹೋದರೂ ಹೋಗಬಹುದು ಎಂಬ ಭಯವಿದೆ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಲಡಾಖ್ ಬಳಿಯ ಪ್ಯಾಂಗಾಂಗ್ ಸರೋವರದ ದಕ್ಷಿಣ ತೀರದಿಂದ ಉತ್ತರ ತೀರಕ್ಕೆ ಸೇತುವೆ ನಿರ್ಮಾಣವಾಗುತ್ತಿರುವ ಹಾಗೂ ಅಲ್ಲಿ ಬೃಹತ್ ಕ್ರೇನ್‌ಗಳು ಬೀಡು ಬಿಟ್ಟಿರುವ ದೃಶ್ಯಗಳನ್ನು ವಿಡಿಯೊದಲ್ಲಿ ನೋಡಬಹುದಾಗಿದೆ.

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಮೌನದಿಂದ ಪಕ್ಕದ ಚೀನಾದ ಗಡಿ ಆಕ್ರಮಣ ಉತ್ಸಾಹ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.