ಕೋಟ(ರಾಜಸ್ಥಾನ): ಬುಡಕಟ್ಟು ಸಮುದಾಯಕ್ಕೆ ಸೇರಿದ ಹದಿಹರೆಯದ ಯುವತಿ ಮೇಲೆ ಆಕೆಯ ನೆರೆಹೊರೆಯವರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದು, ನಂತರ ಗರ್ಭಪಾತದ ಮಾತ್ರೆಗಳನ್ನು ನೀಡಿರುವ ಪ್ರಕರಣ ರಾಜಸ್ಥಾನದ ಜಲವಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಯುವತಿಗೆ 18 ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿದೆ ಎಂದು ಪೋಷಕರು ಹೇಳಿದ್ದರೂ ಸಹ ಪೊಲೀಸರು ಆಕೆಯ ನಿಖರವಾದ ವಯಸ್ಸನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಪೋಕ್ಸೊ ಕಾಯಿದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಲವಾರ್ ಜಿಲ್ಲೆಯ ಮಂಡಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಪರೀಕ್ಷೆಯಲ್ಲಿ ಆರು ತಿಂಗಳ ಗರ್ಭಿಣಿ ಎಂದು ವೈದ್ಯರು ದೃಢಪಡಿಸಿದ್ದಾರೆ.
ತಮ್ಮ ಅಪರಾಧವನ್ನು ಮುಚ್ಚಲು ಆರೋಪಿಗಳು ನೀಡಿದ ಗರ್ಭಪಾತ ಮಾತ್ರೆಗಳಿಂದ ಭ್ರೂಣವು ಮೃತಪಟ್ಟಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪರಿಹಾರ್ ಹೇಳಿದರು.
ದಾವೂದ್ ಎಂಬ ವ್ಯಕ್ತಿ ವಿರುದ್ಧ ಹುಡುಗಿಯ ಕುಟುಂಬ ಸದಸ್ಯರು ದೂರು ನೀಡಿದ್ದು, ಐಪಿಸಿ ಕಾಯ್ದೆ 376 (ಅತ್ಯಾಚಾರ), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗಿದ್ದು), 315 (ಮಗು ಜೀವಂತವಾಗಿ ಹುಟ್ಟುವುದನ್ನು ತಡೆಯಲು ಅಥವಾ ಹುಟ್ಟಿದ ನಂತರ ಸಾಯುವ ಉದ್ದೇಶದಿಂದ ಮಾಡಿದ ಕೃತ್ಯ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಭಿಲ್ ಸಮುದಾಯಕ್ಕೆ ಸೇರಿದ ಹುಡುಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.
ಯುವತಿಗೆ 18 ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿದೆ ಎಂದು ಪೋಷಕರು ಹೇಳಿದ್ದರೂ ಸಹ ಪೊಲೀಸರು ಆಕೆಯ ನಿಖರವಾದ ವಯಸ್ಸನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಪೋಕ್ಸೊ ಕಾಯಿದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.