ಕೋಲ್ಕತ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮತ್ತು ಯುವ ಮುಂದಾಳುಗಳ ನಡುವೆ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಶಿಸ್ತುಕ್ರಮದ ಎಚ್ಚರಿಕೆಯನ್ನು ತೃಣಮೂಲ ಕಾಂಗ್ರೆಸ್ ಪಕ್ಷ ನೀಡಿದೆ.
ಪಕ್ಷದ ಹಿರಿಯ–ಕಿರಿಯ ನಾಯಕರ ನಡುವಣ ವಾಕ್ಸಮರ ತೃಣಮೂಲ ಕಾಂಗ್ರೆಸ್‌ಗೆ ಮುಜುಗರ ತಂದಿರುವುದರಿಂದ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.
ಪಾಲಿಕೆ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಜನವರಿ 22ರ ಬದಲಾಗಿ ಫೆಬ್ರುವರಿ 12ರಂದು ನಡೆಸಲು ನಿರ್ಧರಿಸಿದೆ.
ದಿನಾಂಕ ಬದಲಾವಣೆಗೊಂಡ ಬಳಿಕ ಟಿಎಂಸಿ ಪಕ್ಷದ ಹಲವು ನಾಯಕರು ಬಹಿರಂಗ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
ಇದರ ಬೆನ್ನಲ್ಲೇ ಪಕ್ಷದ ಮುಖ್ಯ ಕಾರ್ಯದರ್ಶಿ ಪಾರ್ಥ ಚಟರ್ಜಿ, ಬಹಿರಂಗವಾಗಿ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಜತೆಗೆ ಯಾವುದೇ ವಿಚಾರವಿದ್ದರೂ, ಆಂತರಿಕ ಸಮಿತಿ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಇದನ್ನು ಪಾಲಿಸದವರ ವಿರುದ್ಧ ಶಿಸ್ತು ಸಮಿತಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಸಿಲಿಗುರಿ ಮಹಾನಗರ ಪಾಲಿಕೆ, ಚಾಂದೆರ್‌ನಗೊರ್ ಮಹಾನಗರ ಪಾಲಿಕೆ, ಬಿಧಾನ್‌ನಗರ್ ಮಹಾನಗರ ಪಾಲಿಕೆ ಮತ್ತು ಅಸಾನೊಲ್ ಮಹಾನಗರ ಪಾಲಿಕೆಗೆ ಫೆ. 12ರಂದು ಚುನಾವಣೆ ನಡೆಯಲಿದೆ.
ಪಶ್ಚಿಮ ಬಂಗಾಳ ಪಾಲಿಕೆ ಚುನಾವಣೆಯಲ್ಲಿ ಮಾತಿನ ಚಕಮಕಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.