ADVERTISEMENT

ಸಾವರ್ಕರ್, ಗಾಂಧಿ ಇಬ್ಬರನ್ನೂ ಬಿಜೆಪಿ ಅರ್ಥ ಮಾಡಿಕೊಂಡಿಲ್ಲ: ಉದ್ಧವ್ ಠಾಕ್ರೆ

ನವದೆಹಲಿ (ಪಿಟಿಐ):
Published 16 ಅಕ್ಟೋಬರ್ 2021, 1:19 IST
Last Updated 16 ಅಕ್ಟೋಬರ್ 2021, 1:19 IST
ಉದ್ಧವ್ ಠಾಕ್ರೆ (ಪಿಟಿಐ ಚಿತ್ರ)
ಉದ್ಧವ್ ಠಾಕ್ರೆ (ಪಿಟಿಐ ಚಿತ್ರ)   

ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯು ಇಬ್ಬರನ್ನೂ ಅರ್ಥ ಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.

ಮುಂಬೈಯ ಷಣ್ಮುಖಾನಂದ ಸಭಾಭವನದಲ್ಲಿ ಶಿವ ಸೇನಾದ ವಾರ್ಷಿಕ ದಸರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಾವರ್ಕರ್ ಕುರಿತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಅವರ ಸಲಹೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ರಾಜನಾಥ್ ಸಿಂಗ್ ಇತ್ತೀಚೆಗೆ ಹೇಳಿದ್ದರು.

ADVERTISEMENT

ದೆಗ್ಲೂರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶಿವ ಸೇನಾದಿಂದ ಬಿಜೆಪಿಗೆ ಪಕ್ಷಾಂತರಗೊಂಡಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರ ಬಗ್ಗೆಯೂ ಉದ್ಧವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವು ಉಪಚುನಾವಣೆಗೆ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸಾರಾಂಶ

ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯು ಇಬ್ಬರನ್ನೂ ಅರ್ಥ ಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.