ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಾನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎಂದು ಪರೋಕ್ಷವಾಗಿ ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅಚ್ಚರಿ ಮೂಡಿಸಿದ್ದಾರೆ.
ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಯಾರು? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೇರೆಯವರ ಮುಖವನ್ನು ನೀವು ನೋಡುತ್ತೀದ್ದೀರಾ? ಎಲ್ಲ ಕಡೆಗಳಲ್ಲೂ ನನ್ನ ಮುಖವನ್ನು ನೋಡಬಹುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾನೇ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿರುವ ಮತ್ತು ಎಲ್ಲಾ ಸಂವಹನಗಳಲ್ಲಿ ಪಕ್ಷದ ಮುಖವಾಗಿರುವ ಪ್ರಿಯಾಂಕಾ ಗಾಂಧಿ, ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ಇನ್ನೂ ಖಚಿತಪಟ್ಟಿಲ್ಲ.ಆದರೆ, ಮುಖ್ಯಮಂತ್ರಿ ಸ್ಥಾನಕ್ಕೇರಲು ಚುನಾವಣೆಯಲ್ಲಿ ಗೆದ್ದಿರಲೇಬೇಕೆಂಬ ನಿಯಮವಿಲ್ಲ ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ.
ಇನ್ನೂ, ಬಿಜೆಪಿಯ ಸಿಎಂ ಅಭ್ಯರ್ಥಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದ ಭದ್ರಕೋಟೆಯಿಂದ ಮತ್ತು ಎಸ್‌ಪಿಯ ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಲೋಕಸಭಾ ಕ್ಷೇತ್ರ ಕೇಂದ್ರ ಯುಪಿಯ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಕೇಂದ್ರ ಕಚೇರಿಯಲ್ಲಿ ಸಹೋದರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಯಾರು? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೇರೆಯವರ ಮುಖವನ್ನು ನೀವು ನೋಡುತ್ತೀದ್ದೀರಾ? ಎಲ್ಲ ಕಡೆಗಳಲ್ಲೂ ನನ್ನ ಮುಖವನ್ನು ನೋಡಬಹುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾನೇ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.