ಬೆಂಗಳೂರು: ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಸಚಿವಗಿರಿ ಅನುಭವಿಸಿದ ಹಿರಿಯರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿ, ಪಕ್ಷ ನಿಷ್ಠರಾದ ಹೊಸಬರಿಗೆ ಅವಕಾಶ ಕೊಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಎಂ.ಪಿ. ರೇಣುಕಾಚಾರ್ಯ ತಯಾರಿ ನಡೆಸಿದ್ದಾರೆ.
ನಗರದಲ್ಲಿ ಗುರುವಾರ ಸಭೆ ನಡೆಸಿದ ಇಬ್ಬರು, ಸಂಪುಟ ಪುನಾರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವೇಗಕ್ಕೆ ಸರಿಯಾಗಿ ಬಿಜೆಪಿಯನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕಾದರೆ ಸಚಿವ ಸಂಪುಟ ಪುನಾರಚನೆಯನ್ನು ತಕ್ಷಣವೇ ಮಾಡಬೇಕು. 2006ರ ಮೈತ್ರಿ ಸರ್ಕಾರ, 2008–2013 ರ ಅವಧಿ, ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಾಗೂ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವರಾಗಿರುವವರನ್ನು ಕೈಬಿಡಬೇಕು. ಮುಖ್ಯಮಂತ್ರಿ ಹೊರತುಪಡಿಸಿ ಇಡೀ ಸಂಪುಟವನ್ನೇ ಬದಲಾಯಿಸಿ, ಪಕ್ಷ ನಿಷ್ಠರು ಮತ್ತು ಹೊಸಬರಿಗೆ ಅವಕಾಶ ಕೊಟ್ಟರೆ 2023ರ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ ಇದೆ’ ಎಂಬ ಅಂಶವನ್ನು ಮನವರಿಕೆ ಮಾಡಿಕೊಡುವ ಬಗ್ಗೆಯೂ ಚರ್ಚೆ ನಡೆಯಿತು.
ಕೆಲವು ಸಚಿವರ ಬಳಿ ಹೋದರೆ ಶಾಸಕರ ಕೆಲಸಗಳನ್ನು ಮಾಡಿಕೊಡುವುದಿಲ್ಲ. ತಾಂತ್ರಿಕ ಕಾರಣ ಉಲ್ಲೇಖಿಸಿ ಕುಂಟು ನೆಪ ಹೇಳುತ್ತಾರೆ. ಅಧಿಕಾರಕ್ಕಾಗಿಯೇ ಬಂದಿರುವವರನ್ನು ಮುಲಾಜಿಲ್ಲದೆ ಕಿತ್ತು ಹಾಕಬೇಕು. ಇಂತಹವರಿಂದ ಸರ್ಕಾರ, ಪಕ್ಷಕ್ಕೆ ಏನೂ ಉಪಯೋಗವಿಲ್ಲ. ಕೆಲವು ಸಚಿವರ ವರ್ತನೆಯಿಂದಲೇ ಇತ್ತೀಚೆಗೆ ನಡೆದ ಉಪ ಚುನಾವಣೆ, ಮೇಲ್ಮನೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ಪಕ್ಷದ ಹಿರಿಯರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ ಎಂದು ತಿಳಿಸಿವೆ.
ಬೆಂಗಳೂರು: ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಸಚಿವಗಿರಿ ಅನುಭವಿಸಿದ ಹಿರಿಯರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿ, ಪಕ್ಷ ನಿಷ್ಠರಾದ ಹೊಸಬರಿಗೆ ಅವಕಾಶ ಕೊಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಎಂ.ಪಿ. ರೇಣುಕಾಚಾರ್ಯ ತಯಾರಿ ನಡೆಸಿದ್ದಾರೆ. ನಗರದಲ್ಲಿ ಗುರುವಾರ ಸಭೆ ನಡೆಸಿದ ಇಬ್ಬರು, ಸಂಪುಟ ಪುನಾರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.