ದಾವಣಗೆರೆ: ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ದಾವಣಗೆರೆ ಜಿಎಂಐಟಿಯಲ್ಲಿ ಗುಪ್ತ ಸಭೆ ನಡೆದಿದೆ.
ಸೋಮವಾರ ರಾತ್ರಿ ದಾವಣಗೆರೆಗೆ ಬಂದಿರುವ ಮುಖ್ಯಮಂತ್ರಿ ಅವರು, ಸಚಿವರಾದ ಬಿ.ಸಿ. ಪಾಟೀಲ, ಸುನೀಲ್ ಕುಮಾರ್ ಸಹಿತ ಪ್ರಮುಖರ ಜತೆಗೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಹಾವೇರಿ ಜಿಲ್ಲೆಯ ಇನ್ನೂ ಕೆಲವು ನಾಯಕರು ಬರಲಿದ್ದು, ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿ ರಚಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರು ತಿಳಿಸಿದ್ದಾರೆ.
ಬಿಎಸ್‌ವೈ ಪ್ರಚಾರ ಮಾಡಲಿದ್ದಾರೆ: ಯಡಿಯೂರಪ್ಪ ಅವರನ್ನ ಯಾರೂ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಸಿಲ್ಲ. ಅವರೇ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ಜೊತೆಗೆ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೂ ಹಾನಗಲ್, ಸಿಂದಗಿಯಲ್ಲಿ ಪ್ರಚಾರ ಮಾಡುತ್ತಾರೆ ಎಂದು ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ.
‘ಎರಡೂ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ತರಕಾರಿ ಬೆಲೆ ಈಗ ಜಾಸ್ತಿಯಾಗಿದೆ. ಇವೆಲ್ಲ ಉಪ ಚುನಾವಣೆಯ ಮೇಲೆ ಪ್ರಭಾವ ಬೀರುವುದಿಲ್ಲ. ಐಟಿ ದಾಳಿಗಳೆಲ್ಲ ಸಹಜ ಪ್ರಕ್ರಿಯೆ’ ಎಂದು ಸೋಮವಾರ ರಾತ್ರಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ದಾವಣಗೆರೆ ಜಿಎಂಐಟಿಯಲ್ಲಿ ಗುಪ್ತ ಸಭೆ ನಡೆದಿದೆ. ಸೋಮವಾರ ರಾತ್ರಿ ದಾವಣಗೆರೆಗೆ ಬಂದಿರುವ ಮುಖ್ಯಮಂತ್ರಿ ಅವರು, ಸಚಿವರಾದ ಬಿ.ಸಿ. ಪಾಟೀಲ, ಸುನೀಲ್ ಕುಮಾರ್ ಸಹಿತ ಪ್ರಮುಖರ ಜತೆಗೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.