ADVERTISEMENT

ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ: ಬಿಜೆಪಿ ವ್ಯಂಗ್ಯ

ಪ್ರಜಾವಾ‌ಣಿ ವೆಬ್ ಡೆಸ್ಕ್‌
Published 12 ಅಕ್ಟೋಬರ್ 2021, 7:49 IST
Last Updated 12 ಅಕ್ಟೋಬರ್ 2021, 7:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ದೇಶದದ್ಯಾಂತ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್‌, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.  

ಸದ್ಯ ಇದೀಗ ಟ್ವೀಟ್‌ ಮೂಲಕ ಕಾಂಗ್ರೆಸ್‌ಗೆ ತಿರುಗೇಟು ಕೊಟ್ಟಿರುವ ಬಿಜೆಪಿ, ‘ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಕಿಡಿಕಾರಿದೆ.

ADVERTISEMENT

ಮಾರ್ಚ್‌ 18, 2016ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುತ್ತಿದ್ದ ವೇಳೆ ವಿಧಾನಸೌಧದ ಸದನದಲ್ಲಿ ವಿದ್ಯುತ್‌ ‘ಕೈ’ಕೊಟ್ಟು, ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ಬಜೆಟ್‌ ಪ್ರತಿ ಓದಿದ ಪ್ರಸಂಗ ನಡೆದಿತ್ತು. ಆ ಸನ್ನಿವೇಶವನ್ನು ಬಿಜೆಪಿ ಮತ್ತೊಮ್ಮೆ ನೆನಪಿಸಿದೆ.

ಇದಕ್ಕೂ ಮುನ್ನ ಕಲ್ಲಿದ್ದಲ್ಲು ಅಭಾವದ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದ ಕಾಂಗ್ರೆಸ್, ‘ಬೇಜವಾಬ್ದಾರಿ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಕತ್ತಲೆ ಆವರಿಸಿದೆ. ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ರಾಜ್ಯದವರೇ ಆಗಿದ್ದರೂ ರಾಜ್ಯಕ್ಕೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು ವಿಪರ್ಯಾಸ. ಬಿಜೆಪಿ ನಾಯಕರು ಹೇಳುವ ‘ಡಬಲ್ ಇಂಜಿನ್ ಗ್ರೋಥ್’ ಎಂಬ ಮಾತುಗಳ ಡೋಂಗಿತನಕ್ಕೆ ಮತ್ತೊಂದು ಉದಾಹರಣೆ ಇದು’ ಎಂದು ಆರೋಪಿಸಿದೆ.

‘ರಾಜ್ಯದಲ್ಲಿ ಸೃಷ್ಟಿಯಾದ ಕಲ್ಲಿದ್ದಲು ಹಾಗೂ ವಿದ್ಯುತ್ ಬಿಕ್ಕಟ್ಟಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬೇಜವಾಬ್ದಾರಿತನವೇ ಕಾರಣ. ಕಲ್ಲಿದ್ದಲು ಕೊರತೆ ತೀವ್ರಗೊಳ್ಳುವವರೆಗೂ ಕಣ್ಮುಚ್ಚಿ ಕುಳಿತಿದ್ದೇಕೆ?, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಹೊಂದಾಣಿಕೆ ಇಲ್ಲವೇ?, ಬಿಕ್ಕಟ್ಟು ಎದುರಿಸಲು ಸರ್ಕಾರದ ಕಾರ್ಯಸೂಚಿ ಏನು?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಾರಾಂಶ

‘ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರ್ನಾಟಕವನ್ನು ಕತ್ತಲೆಯತ್ತ ತಳ್ಳಿದ ಮಹಾನುಭಾವ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.