ಬೆಂಗಳೂರು: ‘ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ಸ್ಥಾನದ ಬಗ್ಗೆ ಬಳಸಿರುವ ಪದ ಪ್ರಯೋಗ, ಪ್ರಜಾತಂತ್ರ ವ್ಯವಸ್ಥೆಗೆ, ಸದನಕ್ಕೆ ತೋರುವ ಅಗೌರವ. ವಿಧಾನಸಭಾಧ್ಯಕ್ಷರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದ್ಧತೆ ಇದ್ದರೆ, ವಿಧಾನಮಂಡಲಕ್ಕೆ ಆಗಿರುವ ಈ ಅಗೌರವಕ್ಕೆ ಸ್ವಯಂ ಪ್ರೇರಿತರಾಗಿ ಹಕ್ಕುಚ್ಯುತಿ ಜಾರಿಗೊಳಿಸುವ ನಂಬಿಕೆ ಇದೆ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಎಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚಿನ ಕಾರ್ಯವೈಖರಿ ನೋಡಿದರೆ ಅವರು ಹತಾಶರಾಗಿರುವುದು ಕಾಣಬಹುದು. ವೈಯಕ್ತಿಕವಾಗಿ ಅವರ ಬಗ್ಗೆ ಇರುವ ಗೌರವ ಬೇರೆ. ಆದರೆ, ಅವರು ರಾಜಕಾರಣದಲ್ಲಿ ಹೋಗುತ್ತಿರುವ ಹಾದಿ ನೋಡಿದರೆ ಅವರು ಮನಬಂದಂತೆ ಮಾತನಾಡುತ್ತಿದ್ದಾರೆ’ ಎಂದರು.
‘ವಿರೋಧ ಪಕ್ಷದ ಸ್ಥಾನಕ್ಕಾಗಿ ನನ್ನ ಸರ್ಕಾರ ತೆಗೆದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅದಕ್ಕೆ ಕಾಂಗ್ರೆಸ್ ಕಾರಣ ಎಂದಿದ್ದಾರೆ. ಆ ಸ್ಥಾನ ಯಾವುದಕ್ಕೋ ಸಮಾನ. ಅದಕ್ಕೆ ಆಸೆ ಪಟ್ಟರು ಎಂದರೆ ವಿಧಾನ ಮಂಡಲಕ್ಕೆ ತೋರುವ ಅಗೌರವ’ ಎಂದು ಉಗ್ರಪ್ಪ ಅಭಿಪ್ರಾಯಪಟ್ಟರು.
‘ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ಸ್ಥಾನದ ಬಗ್ಗೆ ಬಳಸಿರುವ ಪದ ಪ್ರಯೋಗ, ಪ್ರಜಾತಂತ್ರ ವ್ಯವಸ್ಥೆಗೆ, ಸದನಕ್ಕೆ ತೋರುವ ಅಗೌರವ. ವಿಧಾನಸಭಾಧ್ಯಕ್ಷರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದ್ಧತೆ ಇದ್ದರೆ, ವಿಧಾನಮಂಡಲಕ್ಕೆ ಆಗಿರುವ ಈ ಅಗೌರವಕ್ಕೆ ಸ್ವಯಂ ಪ್ರೇರಿತರಾಗಿ ಹಕ್ಕುಚ್ಯುತಿ ಜಾರಿಗೊಳಿಸುವ ನಂಬಿಕೆ ಇದೆ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.