ADVERTISEMENT

ವಿಧಾನ ಪರಿಷತ್‌ ಚುನಾವಣೆ: ಎಚ್‌.ಕೆ. ರಾಮು ಜೆಡಿಎಸ್‌ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 16:39 IST
Last Updated 21 ಜನವರಿ 2022, 16:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಜೂನ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್‌.ಕೆ. ರಾಮು ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವುದಾಗಿ ಜೆಡಿಎಸ್‌ ಘೋಷಿಸಿದೆ.

ರಾಮು ಅವರಿಗೆ ಶುಕ್ರವಾರ ಪತ್ರ ಬರೆದಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ, ‘ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಮತ್ತು ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ನಿಮ್ಮನ್ನು ದಕ್ಷಿಣ ಪದವೀಧರರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಜಯ ಗಳಿಸುವುದಕ್ಕೆ ಪೂರಕವಾಗಿ ಪಕ್ಷ ಸಂಘಟನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನೂ ನೀಡಿದ್ದಾರೆ.

ADVERTISEMENT
ಸಾರಾಂಶ

ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಜೂನ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್‌.ಕೆ. ರಾಮು ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವುದಾಗಿ ಜೆಡಿಎಸ್‌ ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.