ಬೆಂಗಳೂರು: ರಾಜ್ಯದಲ್ಲಿ ಬುಧವಾರ 40,499 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರ ಪೈಕಿ ಹೊಸದಾಗಿ 23,209 ಮಂದಿ ಚೇತರಿಸಿಕೊಂಡಿದ್ದಾರೆ.
ಒಂದು ದಿನದ ಅವಧಿಯಲ್ಲಿ 2.15 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 18.80 ರಷ್ಟಿದೆ. ನಾಲ್ಕು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿಗೆ, 22 ಜಿಲ್ಲೆಗಳಲ್ಲಿ ಮೂರಂಕಿಗೆ ತಲುಪಿದೆ. ಬೆಂಗಳೂರಿನಲ್ಲಿ 24,135 ಪ್ರಕರಣಗಳು ದೃಢಪಟ್ಟರೆ, ಉಳಿದ ಜಿಲ್ಲೆಗಳಿಂದ 16,364 ಪ್ರಕರಣಗಳು ಪತ್ತೆಯಾಗಿವೆ.
ಈ ತಿಂಗಳು 19 ದಿನಗಳಲ್ಲಿ 3.20 ಲಕ್ಷ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 33.29 ಲಕ್ಷಕ್ಕೆ ಏರಿಕೆಯಾಗಿದೆ.
ತುಮಕೂರಿನಲ್ಲಿ 1,804, ಹಾಸನದಲ್ಲಿ 1,785, ಮೈಸೂರಿನಲ್ಲಿ 1,341 ಹಾಗೂ ಮಂಡ್ಯದಲ್ಲಿ 1,340 ಮಂದಿ ಹೊಸದಾಗಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ.
ಸೋಂಕಿತರಲ್ಲಿ ಬುಧವಾರ ಚೇತರಿಸಿಕೊಂಡವರಲ್ಲಿ 18,081 ಮಂದಿ ಬೆಂಗಳೂರಿನವರೇ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 30.23 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 2.67 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 1.84 ಲಕ್ಷ ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಪೀಡಿತರಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಐದು ಮಂದಿ, ಮೈಸೂರಿನಲ್ಲಿ ನಾಲ್ವರು, ದಕ್ಷಿಣ ಕನ್ನಡದಲ್ಲಿ ಮೂರು ಮಂದಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.05 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,486ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಬುಧವಾರ 40,499 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರ ಪೈಕಿ ಹೊಸದಾಗಿ 23,209 ಮಂದಿ ಚೇತರಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.